ಸಿನಿಮಾ ಸುದ್ದಿ

'ಪುಲಿ'ಗೆ ಐಟಿ ಶಾಕ್: ನಟ ವಿಜಯ್, ಸಮಂತಾ, ನಯನತಾರಾ ಮನೆ ಮೇಲೆ ದಾಳಿ

ಬಿಡುಗಡೆಗೆ ಸಿದ್ಧವಾಗಿರುವ 'ಪುಲಿ' ಚಿತ್ರದ ನಾಯಕ ನಟ ವಿಜಯ್, ನಟಿಯರಾದ ಸಮಂತಾ ಹಾಗೂ ನಯನತಾರಾ ಅವರ ನಿವಾಸ ಸೇರಿದಂತೆ 32ಕಡೆ ಆದಾಯ...

'ಪುಲಿ'ಗೆ ಐಟಿ ಶಾಕ್: ನಟ ವಿಜಯ್, ಸಮಂತಾ, ನಯನತಾರಾ ಮನೆ ಮೇಲೆ ದಾಳಿ
ನಟ ವಿಜಯ್, ಸಮಂತಾ
Published On :

ಚೆನ್ನೈ: ಬಿಡುಗಡೆಗೆ ಸಿದ್ಧವಾಗಿರುವ 'ಪುಲಿ' ಚಿತ್ರದ ನಾಯಕ ನಟ ವಿಜಯ್, ನಟಿಯರಾದ ಸಮಂತಾ ಹಾಗೂ ನಯನತಾರಾ ಅವರ ನಿವಾಸ ಸೇರಿದಂತೆ 32ಕಡೆ ಆದಾಯ ತೆರಿಗೆ ಇಲಾಖೆ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದೆ.

ವಿಜಯ್ ಅವರ ಪುಲಿ ನಾಳೆ ತೆರೆಗೆ ಬರುತ್ತಿದ್ದು, ತೆರಿಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಗೂ ಮುನ್ನಾ ದಿನವೇ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

ವರದಿಗಳ ಪ್ರಕಾರ, ಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೆಲವು ಹೂಡಿಕೆಗಳ ಬಗ್ಗೆ ವಿವರಣೆ ನೀಡಿಲ್ಲ. ಹೀಗಾಗಿ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪೊಲೀಸರೊಂದಿಗೆ ಸೇರಿ ಚೆನ್ನೈ, ಹೈದರಾಬಾದ್, ಮದುರೈ ಹಾಗೂ ಕೊಚ್ಚಿನ್ನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

'ಪುಲಿ' ಗುರುವಾರ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಚಿತ್ರವನ್ನು ಚಿಂಬು ದೇವನ್‌ ಅವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ಖ್ಯಾತ ನಟ ಸುದೀಪ್‌ ಅವರು ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.