ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ರಾಹುಲ್ ಜಾಮೀನು ಅರ್ಜಿ ತಿರಸ್ಕೃತ
ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ನಟ ರಾಹುಲ್ ರಾಜ್ ಸಿಂಗ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ...

ಮುಂಬೈ: ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ನಟ ರಾಹುಲ್ ರಾಜ್ ಸಿಂಗ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.
ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೆಳೆಯ ರಾಹುಲ್ ರಾಜ್ ಸಿಂಗ್ ಮೇಲೆ ಹಲವು ಅನುಮಾನಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಾಹುಲ್ ನನ್ನು ಬಂಧನಕ್ಕೊಳಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ರಾಹುಲ್ ದಿನ್ದೋಶಿ ನ್ಯಾಯಾಲಯದಲ್ಲಿ ನಿನ್ನೆ ಅರ್ಜಿಯನ್ನು ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯವು, ಪ್ರತ್ಯೂಷ ಪ್ರಕರಣ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಇತ್ಯರ್ಥವಾಗಬೇಕಿದ್ದು, ಪ್ರಕರಣ ಸಂಬಂಧ ಮತ್ತಷ್ಟು ತನಿಖೆಯಾಗುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ರಾಹುಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಪ್ರತ್ಯೂಷ ಅವರ ಮೃತದೇಹ ಏ.1 ರಂದು ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರತ್ಯೂಷ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತಂತೆ ಸಾಕಷ್ಟು ಅನುಮಾನಗಳು ಮೂಡಿದ್ದವು. ಅಲ್ಲದೆ ಪ್ರತ್ಯೂಷಳನ್ನು ಹತ್ತಿರದಲ್ಲಿ ನೋಡಿದವರು ರಾಹುಲ್ ನತ್ತ ಬೆರಳು ಮಾಡಿದ್ದರು.
ಹೀಗಾಗಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಪೊಲೀಸರು ರಾಹುಲ್ ನನ್ನು ಬಂಧನಕ್ಕೊಳಪಡಿಸಿದ್ದರು. ರಾಹುಲ್ ಪರವಾಗಿ ವಕೀಲ ನೀರಜ್ ಗುಪ್ತಾ ಅವರು ವಾದ ಮಂಡಿಸುತ್ತಿದ್ದರು. ಆದರೆ, ಆದಾವ ಕಾರಣಕ್ಕೋ ಏನೋ ನಿನ್ನೆಯಷ್ಟೇ ಪ್ರಕರಣವನ್ನು ಕೈಬಿಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


