ಮುತ್ತಪ್ಪ ರೈ ಆಗಿ ವಿವೇಕ್ ಓಬೇರಾಯ್: ಕಿಚ್ಚ ಸುದೀಪ್ ಔಟ್
ರಾಮ್ ಗೋಪಾಲ್ ವರ್ಮಾ ನಿರ್ದೇಶನದಲ್ಲಿ ಬರುತ್ತಿರುವ ಭೂಗತ ಲೋಕದ ದೊರೆ ಮುತ್ತಪ್ಪ ರೈ ಜೀವನ ಚರಿತ್ರೆ ಆಧರಿಸಿರುವ 'ರೈ' ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್...

ಮುಂಬಯಿ: ಸೆನ್ಸೇಷನಲ್ ಕಮ್ ಕಾಂಟ್ರವರ್ಶಿಯಲ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ನಿರ್ದೇಶನದಲ್ಲಿ ಬರುತ್ತಿರುವ ಭೂಗತ ಲೋಕದ ದೊರೆ ಮುತ್ತಪ್ಪ ರೈ ಜೀವನ ಚರಿತ್ರೆ ಆಧರಿಸಿರುವ 'ರೈ' ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬದಲು ಕರ್ನಾಟಕದ ಅಳಿಯ ವಿವೇಕ್ ಓಬೇರಾಯ್ ಅಭಿನಯಿಸುತ್ತಿದ್ದಾರೆ.
ರೈ ಪಾತ್ರಕ್ಕೆ ಆರ್‌ಜಿವಿ ಬಾಲಿವುಡ್ ನಟ, ಕರ್ನಾಟಕದ ಅಳಿಯ ವಿವೇಕ್ ಓಬೇರಾಯ್ ಅವರನ್ನು ಆಯ್ಕೆ ಮಾಡಿದ್ದಾರೆ. ಮುತ್ತಪ್ಪ ರೈ ಜೀವನ ಕುರಿತು ಚಿತ್ರ ರೂಪಿಸುತ್ತಿರುವ ವರ್ಮಾ ಆ ವಿಷಯವನ್ನು ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿಯಲ್ಲಿ ಈ ಚಿತ್ರವನ್ನು ನಿರ್ದೇಶಿಸುವುದಾಗಿ ವರ್ಮ ತಿಳಿಸಿದ್ದಾರೆ.
ಮೊದಲಿಗೆ ರೈ ಪಾತ್ರಕ್ಕೆ ಸುದೀಪ್ ಅವರನ್ನು ಆಯ್ಕೆ ಮಾಡಲು ಯೋಚಿಸಿದ್ದೆ. ಆದರೆ ಕೆಲ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಈಗ ವಿವೇಕ್ ಓಬೇರಾಯ್ ಅವರನ್ನು ಆಯ್ಕೆ ಮಾಡಿದ್ದೇನೆ. ಬೆಂಗಳೂರು, ಮಂಗಳೂರು, ಮುಂಬೈ, ದುಬೈ, ಲಂಡನ್‌ಗಳಲ್ಲಿ ಚಿತ್ರದ ಶೂಟಿಂಗ್ ಮಾಡುವುದಾಗಿ ವರ್ಮಾ ಹೇಳಿಕೊಂಡಿದ್ದಾರೆ.
ಮುತ್ತಪ್ಪ ರೈ ಜನ್ಮದಿನವಾದ ಮೇ 1 ರಂದು ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಲಿದೆ. ಮುತ್ತಪ್ಪ ರೈ ಅವರೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಿದ್ದಾರೆ ಅಂತಾ ಕೂಡಾ ಆರ್‌ಜಿವಿ ಟ್ವೀಟ್ ಮಾಡಿದ್ದಾರೆ. ಸಿ ಆರ್ ಮನೋಹರ್ ಚಿತ್ರವನ್ನು ನಿರ್ಮಿಸಲಿದ್ದಾರೆ ಎಂದು ವರ್ಮ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


