ಹೃತಿಕ್-ಕಂಗನಾ ಪ್ರಕರಣ: ಆತ್ಮೀಯ ಅಪ್ಪುಗೆಯ ಫೋಟೊ ವೈರಲ್
ನಟ ಹೃತಿಕ್ ರೋಷನ್ ಹಾಗೂ ಕಂಗನಾ ನಡುವಿನ ಕಾದಾಟ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿರುವ ಮಧ್ಯೆಯೇ ಇದೀಗ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ನವದೆಹಲಿ: ನಟ ಹೃತಿಕ್ ರೋಷನ್ ಹಾಗೂ ಕಂಗನಾ ನಡುವಿನ ಕಾದಾಟ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿರುವ ಮಧ್ಯೆಯೇ ಇದೀಗ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ತಮ್ಮ ಹಾಗೂ ಕಂಗನಾ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಇತ್ತೀಚೆಗಷ್ಟೇ ಹೃತಿಕ್ ರೋಷನ್ ಅವರು ಹೇಳಿದ್ದರು. ಕಂಗನಾ ಹಾಗೂ ಹೃತಿಕ್ ಅವರ ಸಂಬಂಧಕ್ಕೆ ಪುಷ್ಟಿ ನೀಡುವಂತಹ ಹೊಸ ಫೋಟೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.
ಮನರಂಜನಾ ವೆಬ್ ಸೈಟ್ ಆಗಿರುವ ಮಿಸ್ ಮಾಲಿನಿ.ಕಾಂನಲ್ಲಿ ಈ ಫೋಟೋ ಪ್ರಕಟಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ಫೋಟೋದಲ್ಲಿ ಹೃತಿಕ್ ಹಾಗೂ ಕಂಗನಾ ಅವರನ್ನು ತಬ್ಬಿಕೊಂಡಿದ್ದು, ಫೋಟೋದಲ್ಲಿ ಇಬ್ಬರು ಸಾಕಷ್ಟು ಹತ್ತಿರವಾಗಿರುವಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


