ಡಿಸೆಂಬರ್ ನಲ್ಲಿ ಯಶ್-ರಾಧಿಕಾ ವಿವಾಹ: ಅಭಿಮಾನಿಗಳಿಗಾಗಿ ಒಂದು ದಿನ ಆರತಕ್ಷತೆ
ರಾಕಿಂಗ್ ಸ್ಟಾರ್ ಯಶ್ ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದು, ಡಿಸೆಂಬರ್ ಅಂತ್ಯದಲ್ಲಿ ಮೂರು ದಿನಗಳ ಕಾಲ ವಿವಾಹ ನಡೆಯಲಿದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದು, ಡಿಸೆಂಬರ್ ಅಂತ್ಯದಲ್ಲಿ ಮೂರು ದಿನಗಳ ಕಾಲ ವಿವಾಹ ನಡೆಯಲಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ವಿವಾಹ ಸಮಾರಂಭ ನಡೆಯಲಿದೆ. ಅಭಿಮಾನಿಗಳಿಲ್ಲದೇ ಯಶ್ ವಿವಾಹವಿಲ್ಲ, ಹೀಗಾಗಿ ಅಭಿಮಾನಿಗಳಿಗಾಗಿಯೇ ಒಂದು ದಿನ ಆರತಕ್ಷತೆ ಏರ್ಪಡಿಸಲಾಗುತ್ತದೆ ಎಂದು ಯಶ್ ಕುಟುಂಬದ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ನಾಳೆ ವರಮಹಾಲಕ್ಷ್ಮಿ ಹಬ್ಬದಂದು ಯಶ್ ಮತ್ತು ರಾಧಿಕಾ ಪಂಡಿತ್ ನಿಶ್ಚಿತಾರ್ಥ ನಡೆಯಲಿದೆ. ಗೋವಾ ರಾಧಿಕಾ ತಾಯಿಯ ಮನೆಯಾಗಿರುವುದರಿಂದ ಅಲ್ಲಿಯೇ ನಿಶ್ಚಿತಾರ್ಥ ನಡೆಯುತ್ತಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


