ಸಿನಿಮಾ ಸುದ್ದಿ

ಖ್ಯಾತ ತಮಿಳು ನಟ ವಿಜಯ್ ತಂದೆ ಎಸ್.ಎ. ಚಂದ್ರಶೇಖರ್ ಆಸ್ಪತ್ರೆಗೆ ದಾಖಲು

ಖ್ಯಾತ ತಮಿಳು ನಟ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಆವರು ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆಯೊಂದಕ್ಕೆ ಒಳಗಾಗಿದ್ದಾರೆಂದು ಬುಧವಾರ...

ಖ್ಯಾತ ತಮಿಳು ನಟ ವಿಜಯ್ ತಂದೆ ಎಸ್.ಎ. ಚಂದ್ರಶೇಖರ್ ಆಸ್ಪತ್ರೆಗೆ ದಾಖಲು
ನಟ ವಿಜಯ್ ಕುಟುಂಬ (ಸಂಗ್ರಹ ಚಿತ್ರ)
Published On :

ಕೊಟ್ಟಾಯಂ: ಖ್ಯಾತ ತಮಿಳು ನಟ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಆವರು ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆಯೊಂದಕ್ಕೆ ಒಳಗಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.

ನಟ, ನಿರ್ದೇಶಕ, ನಿರ್ಮಾಪಕರಾಗಿರುವ ಎಸ್.ಎ. ಚಂದ್ರಶೇಖರ್ ಅವರು, ರಸಿಗನ್, ಥಮಿಜಾನ್ ರಂತಹ ಸಾಕಷ್ಟು ಚಿತ್ರಗಳನ್ನು ತಮಿಳು ಚಿತ್ರರಂಗಕ್ಕೆ ನೀಡಿದ್ದಾರೆ.

ಮೂಲಗಳು ತಿಳಿಸಿರುವ ಪ್ರಕಾರ, ಚಂದ್ರಶೇಖರ್ ಅವರು ಹಲವು ದಿನಗಳಿಂದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದು, ಸಿನಿಮಾ ಚಿತ್ರವೊಂದರ ಕಥೆಯ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಇದರಂತೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ರೆಸಾರ್ಟ್ ನಲ್ಲಿ ಓಡಾಡುತ್ತಿದ್ದಾಗ ಕಾಲು ಎಡವಿ ಬಿದ್ದಿದ್ದರು ಎಂದು ತಿಳಿದುಬಂದಿದೆ.

ಕೂಡಲೇ ಅವರನ್ನು ಕೇರಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಂತೆ ವೈದ್ಯರು ಚಂದ್ರಶೇಖರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಕೆಲವು ವಾರಗಳ ಕಾಲ ವಿಶ್ರಾಂತಿಯಲ್ಲಿರುವಂತೆ ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ದೇವರ ದಯೆಯಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ. ಮೂಳೆಗಳು ಮುರಿದಿಲ್ಲ. ಚಲನವಲನಗಳು ಸಾಮಾನ್ಯವಾಗಿದೆ. ಆದರೆ, ದೇಹದ ಕೆಲವು ಭಾಗದಲ್ಲಿ ಗಾಯಗಳಾಗಿವೆ. ಅಲ್ಲದೆ, ಮೆದುಳು ಬಳ್ಳಿ (ಸ್ಪೈನಲ್ ಕಾರ್ಡ್) ಗೆ ಕೊಂಚ ಏಟು ಬಿದ್ದಿದೆ ಎಂದು ಹತ್ತಿರದ ಮೂಲಗಳು ತಿಳಿಸಿವೆ. ಪ್ರಸ್ತುತ ವಿಜಯ್ ಅವರು ಚಿತ್ರವೊಂದರ ಶೂಟಿಂಗ್ ನಲ್ಲಿ ಕಾರ್ಯನಿರತರಾಗಿದ್ದು, ಸಂಜೆ ವೇಳೆಗೆ ತಂದೆಯನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.