ಸಿನಿಮಾ ಸುದ್ದಿ

ಚೆನ್ನಾಂಬಿಕಾ ಫಿಲ್ಮ್ ಬ್ಯಾನರ್‍ನಡಿ ನಟ ಪವನ್‌ ಕಲ್ಯಾಣ್‌ಗಾಗಿ ಚಿತ್ರ ನಿರ್ಮಾಣ: ಎಚ್ಡಿಕೆ

ಜನಸೇನಾ ಪಕ್ಷದ ಅಧ್ಯಕ್ಷ ಹಾಗೂ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಅವರನ್ನು ಹೈದರಾಬಾದ್ ನಲ್ಲಿ ಇತ್ತೀಚೆಗಷ್ಟೇ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ...

ಚೆನ್ನಾಂಬಿಕಾ ಫಿಲ್ಮ್ ಬ್ಯಾನರ್‍ನಡಿ ನಟ ಪವನ್‌ ಕಲ್ಯಾಣ್‌ಗಾಗಿ ಚಿತ್ರ ನಿರ್ಮಾಣ: ಎಚ್ಡಿಕೆ
ಪವನ್‌ ಕಲ್ಯಾಣ್‌, ಕುಮಾರಸ್ವಾಮಿ
Published On :

ಬೆಂಗಳೂರು: ಜನಸೇನಾ ಪಕ್ಷದ ಅಧ್ಯಕ್ಷ ಹಾಗೂ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಅವರನ್ನು ಹೈದರಾಬಾದ್ ನಲ್ಲಿ ಇತ್ತೀಚೆಗಷ್ಟೇ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾವು ಪವನ್ ಕಲ್ಯಾಣ್ ಅವರಿಗಾಗಿ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಪವನ್ ಕಲ್ಯಾಣ್ ಅವರೊಂದಿಗೆ ಸಿನಿಮಾ ಹಾಗೂ ರಾಜಕೀಯ ಸಂಬಂಧ ಚರ್ಚಿಸಿದ್ದು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರ ಚೆನ್ನಾಂಬಿಕಾ ಫಿಲ್ಮ್ ಸಂಸ್ಥೆ ಶೀಘ್ರದಲ್ಲೇ ದೊಡ್ಡ ಬಜೆಟ್ ನ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿರುವ ಕನ್ನಡ ಮತ್ತು ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಜಾಗ್ವಾರ್ ಸಿನಿಮಾ ಬಿಡುಗಡೆಯಾದ ತಕ್ಷಣ, ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಮತ್ತೊಂದು ಸಿನಿಮಾ ನಿರ್ಮಾಣ ಮಾಡುವ ಉದ್ದೇಶದಿಂದ ಪವನ್ ಕಲ್ಯಾಣ್ ರನ್ನು ಭೇಟಿ ಮಾಡಿದ್ದರು. ಇದೀಗ ತಮ್ಮ ಚಿತ್ರದಲ್ಲಿ ಅವರು ಅಭಿನಯಿಸಲು ಒಪ್ಪಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.