ಮಲಯಾಳಂನ ಹಿರಿಯ ನಟ ಜಗನ್ನಾಥ ವರ್ಮಾ ವಿಧಿವಶ
ಮಲಯಾಳಂನ ಹಿರಿಯ ನಟ ಜಗನ್ನಾಥ ವರ್ಮಾ ಅವರು ವಿಧಿವಶರಾಗಿದ್ದಾರೆ...

Published On :
ತಿರುವನಂತಪುರಂ: ಮಲಯಾಳಂನ ಹಿರಿಯ ನಟ ಜಗನ್ನಾಥ ವರ್ಮಾ ಅವರು ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ 77 ವರ್ಷದ ಜಗನ್ನಾಥ ವರ್ಮಾ ಅವರನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ.
ಜಗನ್ನಾಥ ವರ್ಮಾ ಅವರು ಸರಿಸುಮಾರು 200 ಚಿತ್ರಗಳು ಹತ್ತಾರು ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರರಂಗಕ್ಕೂ ಮುನ್ನ ಜಗನ್ನಾಥ ವರ್ಮಾ ಅವರು ಕೇರಳ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಸೂಪರಿಂಡೆಂಟ್ ಆಫ್ ಪೊಲೀಸ್ ರ್ಯಾಂಕ್ ನೊಂದಿಗೆ ನಿವೃತ್ತರಾಗಿದ್ದ ಅವರು ನಂತರ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.
ಜಗನ್ನಾಥ ಅವರು ಹೆಚ್ಚಾಗಿ ಪೊಲೀಸ್ ಅಧಿಕಾರಿ, ಕ್ರೈಸ್ತ ಪಾದ್ರಿ, ಬಿಷಪ್ ಮತ್ತು ಹಿಂದು ಆರ್ಚಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


