ಬಾಲಿವುಡ್ ನಲ್ಲಿ ಸ್ಯಾಂಡಲ್ ವುಡ್ ಛಾಯಾಗ್ರಹಕ ಹೆಚ್ ಸಿ ವೇಣು ಕೈಚಳಕ!
ಸ್ಯಾಂಡಲ್ ವುಡ್ ನ ಖ್ಯಾತ ಛಾಯಾಗ್ರಹಕ ಹೆಚ್ ಸಿ ವೇಣು ಶೀಘ್ರವೇ ಬಾಲಿವುಡ್ ನಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ.

Published On :
ಸ್ಯಾಂಡಲ್ ವುಡ್ ನ ಖ್ಯಾತ ಛಾಯಾಗ್ರಹಕ ಹೆಚ್ ಸಿ ವೇಣು ಶೀಘ್ರವೇ ಬಾಲಿವುಡ್ ನಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ.
ಸ್ಪರ್ಷ, ಆ ದಿನಗಳು, ಜಗ್ಗುದಾದ, ಮಮ್ಮಿ ಸೇವ್ ಮಿ ಚಿತ್ರಗಳು ಸೇರಿದಂತೆ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ಛಾಯಾಗ್ರಹಣ ಮಾಡಿರುವ ಹೆಚ್ ಸಿ ವೇಣು, ಪ್ರಭುದೇವ ನಿರ್ದೇಶನದ ಅಭಿಷೇಕ್ ಬಚ್ಚನ್ ಅವರ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದಾರೆ. ಚಿತ್ರಕ್ಕೆ ಲೆಫ್ಟಿ (ಎಡಗೈ ಬಳಕೆ ಮಾಡುವವರು) ಎಂಬ ಶೀರ್ಷಿಕೆ ನೀಡಲಾಗುತ್ತದೆ ಎಂಬ ವದಂತಿಗಳಿದ್ದು, ಈ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ.
ಲೆಫ್ಟಿ ಚಿತ್ರದ ನಾಯಕನಾಗಲಿರುವ ಅಭಿಷೇಕ್ ಬಚ್ಚನ್ ನಿಜ ಜೀವನದಲ್ಲೂ ಬರವಣಿಗೆಗೆ ಎಡಗೈ ಬಳಸುತ್ತಾರೆ ಎಂಬುದು ವಿಶೇಷವಾಗಿದ್ದು 2017 ರ ಮಾರ್ಚ್ ನಿಂದ ಸಿನಿಮಾ ಚಿತ್ರೀಕರಣ ನಡೆಯಲಿದೆ. ಬಾಲಿವುಡ್ ಗೆ ಪ್ರವೇಶಿಸುತ್ತಿರುವುದರ ಬಗ್ಗೆ ಸಿಟಿ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿರುವ ವೇಣು, ಪ್ರಭುದೇವಾ ಹಾಗೂ ಅಭಿಷೇಕ್ ಬಚ್ಚನ್ ಅವರೊಂದಿಗೆ ಕೆಲಸ ಮಾಡುವುದು ಕನಸಿನ ಯೋಜನೆಯಾಗಿತ್ತು ಈಗ ಆ ಅವಕಾಶ ಬಂದಿದೆ, ವಾಸ್ತವದಲ್ಲಿ ಬಾಲಿವುಡ್ ಗೆ ಪ್ರವೇಶಿಸುವುದು ನನ್ನ ಕನಸಾಗಿರಲಿಲ್ಲ. 15 ವರ್ಷಗಳಿಂದ ಸ್ನೇಹಿತರಾಗಿರುವ ಪ್ರಭುದೇವಾ ಕಾರಣದಿಂದಾಗಿ ಬಾಲಿವುಡ್ ಗೆ ಹೋಗುತ್ತಿದ್ದೇನೆ ಎಂದಿದ್ದಾರೆ.
ಹೆಚ್ ಸಿ ವೇಣು ಪ್ರಸ್ತುತ ಅರ್ಜುನ್ ಸರ್ಜಾ ನಿರ್ದೇಶನದ, ಪ್ರೇಮ ಬರಹ ಚಿತ್ರಕ್ಕಾಗಿ ಛಾಯಾಗ್ರಹಣ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bollywoodಬಾಲಿವುಡ್Abhishek Bachchanಅಭಿಷೇಕ್ ಬಚ್ಚನ್ಪ್ರಭುದೇವPrabhu DevaCinematogapher HC Venuಛಾಯಾಗ್ರಹಕ ಹೆಚ್ ಸಿ ವೇಣು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


