ರಾಜಕೀಯದಲ್ಲಿ ಧರ್ಮ ತರುವುದು ಸರಿಯಲ್ಲ: ಕಮಲ್ ಹಾಸನ್
ಜರ್ಮನಿಯಲ್ಲಿ ಹಿಟ್ಲರ್ನ ಆಳ್ವಿಕೆ ಹಾಗೂ ಭಾರತದಲ್ಲಿನ ತುರ್ತುಪರಿಸ್ಥಿತಿ ಹೇರಿಕೆಯು ಪ್ರಜಾಪ್ರಭುತ್ವದ ಪ್ರಕ್ರಿಯೆ. ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ...

ಬೋಸ್ಟನ್: ಜರ್ಮನಿಯಲ್ಲಿ ಹಿಟ್ಲರ್ನ ಆಳ್ವಿಕೆ ಹಾಗೂ ಭಾರತದಲ್ಲಿನ ತುರ್ತುಪರಿಸ್ಥಿತಿ ಹೇರಿಕೆಯು ಪ್ರಜಾಪ್ರಭುತ್ವದ ಪ್ರಕ್ರಿಯೆ. ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ನಿರಂತರ ಕಾವಲು ಅಗತ್ಯ ಎಂದು ಖ್ಯಾತ ನಟ ಕಮಲ್ ಹಾಸನ್ ಅಭಿಪ್ರಾಯ ಪಟ್ಟಿದ್ದಾರೆ.
ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮಾವೇಶವೊಂದರಲ್ಲಿ ಮಾತನಾಡಿದ ಅವರು ಅಭಿವೃಕ್ತಿ ಸ್ವಾತಂತ್ರ್ಯವನ್ನು ಲಘುವಾಗಿ ಪರಿಗಣಿಸಬಾರದು ಎಂದರು.
ಪ್ರಜಾಪ್ರಭುತ್ವವು ಸಾಮಾನ್ಯವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಏಕಮಾತ್ರ ಭದ್ರ ಕೋಟೆ ಎನ್ನಲಾಗಿದೆ. ಆದರೆ ಜಾಗ್ರತೆ ವಹಿಸದಿದ್ದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯ ತಪ್ಪಿದ್ದಲ್ಲ. ನಾನು ಭಾರತದ ಪ್ರಜಾಪ್ರಭುತ್ವವನ್ನು ಟೀಕೆ ಮಾಡುತ್ತಿದ್ದೇನೆ ಅಂದುಕೊಳ್ಳುವುದು ಬೇಡ. ಅದರ ಬಗ್ಗೆ ನನಗೆ ಹೆಮ್ಮೆ ಇದೆ. ವಿಶ್ವಕ್ಕೆ ಭಾರತ ಮಾದರಿಯಾಗಬೇಕು ಎಂಬುದು ನನ್ನ ಬಯಕೆ. ರಾಜಕೀಯದಲ್ಲಿ ಧರ್ಮವನ್ನು ಬೆರೆಸುವುದು ಆರೋಗ್ಯಕರವಲ್ಲ’ ಎಂದು ಪ್ರತಿಪಾದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


