ಹಿರಿಯ ನಟಿ ಲೀಲಾವತಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಅನಾರೋಗ್ಯದ ನಿಮಿತ್ತ ಹಿರಿಯ ನಟಿ ಲೀಲಾವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ...

ಬೆಂಗಳೂರು: ಅನಾರೋಗ್ಯದ ನಿಮಿತ್ತ ಹಿರಿಯ ನಟಿ ಲೀಲಾವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅನಾರೋಗ್ಯದ ನಿಮಿತ್ತ ಲೀಲಾವತಿ ಅವರು ತೆಗೆದುಕೊಳ್ಳುತ್ತಿದ್ದ ಔಷಧಿಯಿಂದಾಗಿ ಅವರ ಆರೋಗ್ಯ ಏರುಪೇರಾಗಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಾಲಾಗುತ್ತಿದೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಲೀಲಾವತಿ ಅವರು ಸಾಕಿದ್ದ ನಾಯಿ ಅವರನ್ನು ಹಿಡಿದು ಎಳೆದಿದೆ. ಈ ವೇಳೆ ಅವರು ಆಯತಪ್ಪಿ ಬಿದ್ದಿದ್ದು, ಇದರ ನೋವು ನಿವಾರಣೆಗಾಗಿ ಮನೆಯಲ್ಲಿಯೇ ಒಂದುಷ್ಟು ಮಾತ್ರೆಗಳನ್ನು ಸೇವಿಸುತ್ತಿದ್ದರು.
ಆದರೆ ಈ ಮಾತ್ರೆಗಳಿಂದಾಗಿ ಅವರಿಗೆ ಅಲರ್ಜಿ ಶುರುವಾಗಿದ್ದು, ಇದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಲೀಲಾವತಿ ಅವರು ಪುತ್ರ ನಟ ವಿನೋದ್ ರಾಜ್ ಹೇಳಿದ್ದಾರೆ. ಪ್ರಸ್ತುತ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಲೀಲಾವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಸಂಜೆಯವರೆಗೂ ಅವರ ಮೇಲೆ ನೀಗಾವಹಿಸಲಾಗಿದೆ. ಬಳಿಕ ಅವರ ಆರೋಗ್ಯ ಪರಿಸ್ಥಿತಿ ನೋಡಿ ಮನೆಗೆ ಕಳುಹಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


