ಕಿಲ್ಲರ್ ಬಿಎಂಟಿಸಿ ಗೆ ಬಲಿಯಾದ ನಟ ದರ್ಶನ್ ಅಭಿಮಾನಿ
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಮರಳುತ್ತಿದ್ದಾಗ ಬಿಎಂಟಿಸಿ ಬಸ್ ಚಾಲಕನ ಅಡ್ಡಾದಿಡ್ಡಿ ಚಾಲನೆಯಿಂದ ನಾಯಂಡಹಳ್ಳಿ ಮೇಲ್ಸುತುವೆ ಬಳಿ ಸಂಭವಿಸಿದ ಅಪಘಾತದಲ್ಲಿ ದರ್ಶನ್ ಅಭಿಮಾನಿ...

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಮರಳುತ್ತಿದ್ದಾಗ ಬಿಎಂಟಿಸಿ ಬಸ್ ಚಾಲಕನ ಅಡ್ಡಾದಿಡ್ಡಿ ಚಾಲನೆಯಿಂದ ನಾಯಂಡಹಳ್ಳಿ ಮೇಲ್ಸುತುವೆ ಬಳಿ ಸಂಭವಿಸಿದ ಅಪಘಾತದಲ್ಲಿ ದರ್ಶನ್ ಅಭಿಮಾನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಥಣಿಸಂದ್ರದ ನಿವಾಸಿ ಮಧು ಕುಮಾರ್ ಮೃತ ದುರ್ದೈವಿ. ಗಾಯಗೊಂಡಿರುವ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ಮುಂದಿನ ಕೆಎಸ್‌ಆರ್‌ಟಿಸಿ ಬಸ್ ಹಿಂದಿಕ್ಕಲು ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ತನ್ನ ನೆಚ್ಚಿನ ನಟನ ಜನ್ಮ ದಿನದ ಶುಭ ಕೋರಲು ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆಗೆ ಮುಂಜಾನೆಯೇ ಗೆಳೆಯ ಸುಧಾಂಶು ಜತೆ ತೆರಳಿದ್ದ ಮಧುಕುಮಾರ್, ಬಳಿಕ ನಟನನ್ನು ಕಂಡು ಬೆಳಗ್ಗೆ 10.40ರಲ್ಲಿ ಮನೆಗೆ ಮರಳುತ್ತಿದ್ದರು.
ಆ ವೇಳೆ ಸಿಟಿ ಮಾರ್ಕೆಟ್‌ನಿಂದ ಕೆಂಗೇರಿ ತೆರಳುತ್ತಿದ್ದ ಬಿಎಂಟಿಸಿ ಬಸ್ ಚಾಲಕ ನಾಗರಾಜ್, ನಾಯಡಂಹಳ್ಳಿ ಮೇಲ್ಸೇತುವೆಯಲ್ಲಿ ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಹಿಂದಿಕ್ಕಲು ಆತ ಯತ್ನಿಸಿದ್ದಾನೆ. ಆಗ ಚಾಲಕನ ನಿಯಂತ್ರಣ ತಪ್ಪಿದ ಬಿಎಟಂಸಿ ಬಸ್, ರಸ್ತೆ ವಿಭಜಕ ದಾಟಿ ಹಠತ್ತಾಗಿ ಬಲ ಬದಿಗೆ ಬಂದಿದೆ. ಬಳಿಕ ರಾಜರಾಜೇಶ್ವರಿ ನಗರದಿಂದ ಥಣಿಸಂದ್ರ ಕಡೆಗೆ ತೆರಳುತ್ತಿದ್ದ ಮಧು ಬೈಕ್‌ಗೆ ಮುಖಾಮುಖಿಯಾಗಿ ಬಸ್ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಧು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಸುಧಾಂಶುಗೆ ಸಣ್ಣಪುಟ್ಟ ಗಾಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


