ಸಿನಿಮಾ ಸುದ್ದಿ

'ಹಾಫ್ ಮೆಂಟ್ಲು' ಚಿತ್ರ ನಿರ್ಮಾಪಕ ಶಶಿಕುಮಾರ್ ಆತ್ಮಹತ್ಯೆಗೆ ಯತ್ನ

ಚಿತ್ರ ಬಿಡುಗಡೆಗೆ ಸಹಕಾರ ಸಿಗಲಿಲ್ಲ ಎಂಬ ಕಾರಣಕ್ಕೆ ಹಾಫ್ ಮೆಂಟ್ಲು ಚಿತ್ರದ ನಿರ್ಮಾ ಶಶಿಕುಮಾರ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ...

'ಹಾಫ್ ಮೆಂಟ್ಲು' ಚಿತ್ರ ನಿರ್ಮಾಪಕ ಶಶಿಕುಮಾರ್ ಆತ್ಮಹತ್ಯೆಗೆ ಯತ್ನ
'ಹಾಫ್ ಮೆಂಟ್ಲು' ಚಿತ್ರ ನಿರ್ಮಾಪಕ ಶಶಿಕುಮಾರ್ ಆತ್ಮಹತ್ಯೆಗೆ ಯತ್ನ
Published On :
ಬೆಂಗಳೂರು: ಚಿತ್ರ ಬಿಡುಗಡೆಗೆ ಸಹಕಾರ ಸಿಗಲಿಲ್ಲ ಎಂಬ ಕಾರಣಕ್ಕೆ ಹಾಫ್ ಮೆಂಟ್ಲು ಚಿತ್ರದ ನಿರ್ಮಾಪಕ ಶಶಿಕುಮಾರ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. 
ನಗರದ ಕಾಮಾಕ್ಷಿಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ನಿರ್ಮಾಪಕ ಶಶಿಕುಮಾರ್ ಅವರು ವಿಷ ಸೇವನೆ ಮಾಡಿದ್ದು, ಕೂಡಲೇ ಅವರನ್ನು ಸುಂಕದಕಟ್ಟೆಯಲ್ಲಿರುವ ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಶಶಿಕುಮಾರ್ ಅವರು ನವನಟ ಸಂದೀಪ್ ಅಭಿನಯದ 'ಹಾಫ್ ಮೆಂಟಲ್' ಚಿತ್ರದ ನಿರ್ಮಾಪಕರಾಗಿದ್ದು, ಚಿತ್ರದ ಚಿತ್ರೀಕರಣ ಮುಗಿದು ವರ್ಷಗಳೇ ಕಳೆದರೂ, ಕಳೆದೆರಡು ವರ್ಷಗಳಿಂದಲೂ ಚಿತ್ರ ಬಿಡುಗಡೆಗೆ ಪ್ರಯತ್ನ ನಡೆಸುತ್ತಿದ್ದರು. ಆದರೆ, ಚಿತ್ರ ಬಿಡುಗಡೆಗೆ ಯಾವುದೇ ಸಹಕಾರ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದರು. ಚಿತ್ರ ನಿರ್ಮಾಣಕ್ಕಾಗಿ ಶಶಿಕುಮಾರ್ ಅವರು ಹಲವು ಸಾಲಗಳನ್ನು ಮಾಡಿಕೊಂಡಿದ್ದು, ಹಲವು ದಿನಗಳಿಂದಲೂ ಮಾನಸಿಕೆ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.