ಎಲ್ಲ ಆರೋಪಗಳು ಸುಳ್ಳೆಂದು ಸಾಬೀತು: ಟ್ವಿಟರ್ ನಲ್ಲಿ ನಟಿ ಮೇಘನಾ
ತಮಿಳು ಉದ್ಯಮಿಯೊಬ್ಬರನ್ನು ವಂಚಿಸಿದ ಆರೋಪ ಎದುರಿಸುತ್ತಿದ್ದ ನಟಿ ಮೇಘನಾ ರಾಜ್ ಅವರು ಸುಳ್ಳು ಪ್ರಕರಣದಿಂದ ತಾನು ದೋಷಮುಕ್ತಗೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ...

ಬೆಂಗಳೂರು: ತಮಿಳು ಉದ್ಯಮಿಯೊಬ್ಬರನ್ನು ವಂಚಿಸಿದ ಆರೋಪ ಎದುರಿಸುತ್ತಿದ್ದ ನಟಿ ಮೇಘನಾ ರಾಜ್ ಅವರು ಸುಳ್ಳು ಪ್ರಕರಣದಿಂದ ತಾನು ದೋಷಮುಕ್ತಗೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡು ಮೂಲದ ಉದ್ಯಮಿ ಜನಾರ್ಧನ್ ಎಂಬುವವರು ನೀಡಿದ್ದ ದೂರಿನ ಹಿನ್ನಲೆಯಲ್ಲಿ ಮಾಧ್ಯಮಗಳಲ್ಲಿ ಈ ವಿಚಾರ ಭಾರಿ ಚರ್ಚೆಯಾಗುತ್ತಿತ್ತು. ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರಿಗೂ ಜನಾರ್ಧನ್ ಇ-ಮೇಲ್ ಮೂಲಕ ದೂರು ನೀಡಿದ್ದರು. ಇದೀಗ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ನಟಿ ಮೇಘನಾ, ತಮ್ಮ ವಿರುದ್ಧದ ಎಲ್ಲ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಅಲ್ಲದೆ ಪ್ರಕರಣದಲ್ಲಿ ಪೊಲೀಸರು ತಮಗೆ ಕ್ಲೀನ್ ಚಿಟ್ ನೀಡಿದ್ದು, ಪ್ರಕರಣದ ತನಿಖೆಯನ್ನು ಸ್ಥಗಿತಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ಹಿರಿಯ ನಟ ಸುಂದರ್ ರಾಜ್ ಹಾಗೂ ನಟಿ ಪ್ರಮೀಳಾ ಜೋಷಾಯ್ ದಂಪತಿ ಮಗಳಾದ ನಟಿ ಮೇಘನಾ ರಾಜ್ ತಮ್ಮನ್ನು ವಿವಾಹವಾಗಿ ಬಳಿಕ ವಂಚಿಸಿದ್ದಾರೆ. ವಿವಾಹ ಸಂಬಂಧ ತಮ್ಮ ಬಳಿ ಇದ್ದ ದಾಖಲೆಗಳನ್ನು ಅವರು ಕದ್ದಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಮೂಲದ ಉದ್ಯಮಿ ಜನಾರ್ಧನ್ ಎಂಬುವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಸ್.ಮೆಘರಿಕ್ ಅವರಿಗೆ ಇ -ಮೇಲ್ ಮೂಲಕ ದೂರು ನೀಡಿದ್ದರು. ಇನ್ನು ಈ ಪ್ರಕರಣವನ್ನು ಪೊಲೀಸ್ ಆಯುಕ್ತ ಎಸ್. ಮೆಘರಿಕ್ ಜೆ.ಪಿ ನಗರ ಪೊಲೀಸರಿಗೆ ವರ್ಗಾಯಿಸಿದ್ದರು.
De outcome of de investigation n de closure of de case is quite heartening an vindicates my stand
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


