'1st ರ್ಯಾಂಕ್ ರಾಜು' ವಿದೇಶಕ್ಕೆ!
ಎಚ್ ಎನ್ ನರೇಶ್ ಕುಮಾರ್ ಅವರ ಚೊಚ್ಚಲ ಚಿತ್ರ '1st ರ್ಯಾಂಕ್ ರಾಜು' ೫೦ ಚಿತ್ರಮಂದಿರಗಳಲ್ಲಿ ೫೦ ದಿನ ಪೂರೈಸಿದ್ದು ಈಗ ವಿದೇಶದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ ಎಂದಿದ್ದಾರೆ ನಿರ್ದೇಶಕ.

ಬೆಂಗಳೂರು: ಎಚ್ ಎನ್ ನರೇಶ್ ಕುಮಾರ್ ಅವರ ಚೊಚ್ಚಲ ಚಿತ್ರ '1st ರ್ಯಾಂಕ್ ರಾಜು' ೫೦ ಚಿತ್ರಮಂದಿರಗಳಲ್ಲಿ ೫೦ ದಿನ ಪೂರೈಸಿದ್ದು ಈಗ ವಿದೇಶದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ ಎಂದಿದ್ದಾರೆ ನಿರ್ದೇಶಕ.
"ಆಸ್ಟ್ರೇಲಿಯಾ, ಯುರೋಪ್, ಯು ಎಸ್ ಎ ಮತ್ತು ಯು ಕೆ ಸೇರಿದಂತೆ ಮುಂದಿನ ೧೫ ದಿನಗಳಲ್ಲಿ ೩೫ ದೇಶಗಳಲ್ಲಿ ಸಿನೆಮಾ ಬಿಡುಗಡೆ ಮಾಡಲಿದ್ದೇವೆ" ಎಂದು ಅವರು ತಿಳಿಸಿದ್ದಾರೆ.
ಈ ಸಿನೆಮಾ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ರಿಮೇಕ್ ಆಗಲಿದೆ ಎಂದು ಕೂಡ ಅವರು ತಿಳಿಸಿದ್ದಾರೆ.
ತೆಲುಗು ಅವತರಿಣಿಕೆಗೆ ರಾಕ್ಲೈನ್ ವೆಂಕಟೇಶ್ ಆಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶಿಕ್ಷಣದ ವಿಷಯವಾಗಿರುವುದರಿಂದ '1st ರ್ಯಾಂಕ್ ರಾಜು' ನೋಡಲು ಆಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


