ಸಿನಿಮಾ ಸುದ್ದಿ

ಖ್ಯಾತ ಮಲಯಾಳಂ ನಟಿ ಕಲ್ಪನಾ ವಿಧಿವಶ

ದಕ್ಷಿಣ ಭಾರತದ ಖ್ಯಾತ ನಟಿ ಕಲ್ಪನಾ ರಂಜನಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು...

ಖ್ಯಾತ ಮಲಯಾಳಂ ನಟಿ ಕಲ್ಪನಾ ವಿಧಿವಶ
ನಟಿ ಕಲ್ಪನಾ ರಂಜನಿ (ಸಂಗ್ರಹ ಚಿತ್ರ)
Published On :

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಕಲ್ಪನಾ ರಂಜನಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೇಲ್ನೋಟಕ್ಕೆ ಹೃದಯಾಘಾತಕ್ಕೆ ಒಳಗಾಗಿ ನಟಿ ಕಲ್ಪನಾ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ತೆಲುಗು ಚಿತ್ರವೊಂದರ ಚಿತ್ರೀಕರಣದ ನಿಮಿತ್ತ ಹೈದರಾಬಾದಿನ ಖಾಸಗಿ ಹೊಟೆಲ್ ನಲ್ಲಿ ನಟಿ  ಕಲ್ಪನಾ ಅವರು ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಕೊಠಡಿಯ ಬಾಗಿಲು ತೆಗೆದಾಗ ಕಲ್ಪನಾ ಅವರು ಪ್ರಜ್ಞೆತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಾಬರಿಯಾದ ಸಿಬ್ಬಂದಿ ಕೂಡಲೇ ಅವರನ್ನು ಆಸ್ಪತ್ರೆಗೆ  ದಾಖಲು ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ನಿಧನರಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

1983ರಲ್ಲಿ ಬಾಲಕಲಾವಿದೆಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಕಲ್ಪನಾ ಅವರು, ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದ್ದರು. ಮಲಯಾಳಂ, ಕನ್ನಡ, ತೆಲುಗು ಮತ್ತು  ತಮಿಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕಲ್ಪನಾ ಅವರು 2012ರಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. ಬಹುತೇಕ ಹಾಸ್ಯ ಕಲಾವಿದೆಯಾಗಿ  ಗುರುತಿಸಿಕೊಂಡಿದ್ದ ಕಲ್ಪನಾ ಅವರು ಕನ್ನಡದಲ್ಲಿ ಅಭಿನಯಿಸಿದ್ದರು.1990ರಲ್ಲಿ ತೆರೆಕಂಡಿದ್ದ ನಟ ಕಾಶಿನಾಥ್ ಅವರ ಚಪಲ ಚೆನ್ನಿಗರಾಯ ಚಿತ್ರದಲ್ಲಿ ನಾಯಕನಟಿಯಾಗಿ ಗೃಹಿಣಿ ಪಾತ್ರದಲ್ಲಿ  ಅಭಿನಯಿಸಿದ್ದರು.

ನಟಿ ಊರ್ವಶಿ ಮತ್ತು ಕಲಾರಂಜಿನಿ ಅವರು ಕಲ್ಪನಾ ಅವರ ಸಹೋದರಿಯರಾಗಿದ್ದಾರೆ. ಕಲ್ಪನಾ ಅವರ ಅಂತಿಮ ವಿಧಿವಿಧಾನ ಕುರಿತು ಈ ವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.