ಶಿವರಾಜ್ ಕುಮಾರ್ ಗಾಗಿ ಸಂತೋಷ್ ಥಿಯೇಟರ್ ನಿಂದ ಮಾಸ್ಟರ್ ಪೀಸ್ ಎತ್ತಂಗಡಿ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್ ಚಿತ್ರವನ್ನು ಎತ್ತಂಗಡಿ

ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಸಖತ್ ಹಿಟ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಜೊತೆಗೆ ಹಿಂದಿನ ಎಲ್ಲಾ ಚಿತ್ರಗಳ ದಾಖಲೆಗಳನ್ನು ಗಾಳಿಗೆ ತೂರಿ ಹೆಚ್ಚು ಹಣ ಗಳಿಸಿದೆ.
ಮಾಸ್ಟರ್ ಪೀಸ್ ಚಿತ್ರ 50 ನೇ ದಿನಕ್ಕಾಗಿ ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.
ಆದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್ ಚಿತ್ರವನ್ನು ಎತ್ತಂಗಡಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.
ಇದು ಯಶ್ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಇದರಿಂದ ಮುಂದಿನ ದಿನದಲ್ಲಿ ಮತ್ತೊಂದು ಸ್ಟಾರ್ ವಾರ್ ಗೆ ಕಾರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


