ಸಿನಿಮಾ ಸುದ್ದಿ

ನಟ ಸುದೀಪ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು: ಹೆಬ್ಬುಲಿ ಚಿತ್ರೀಕರಣ ಸ್ಧಗಿತ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ...

ನಟ ಸುದೀಪ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು: ಹೆಬ್ಬುಲಿ ಚಿತ್ರೀಕರಣ ಸ್ಧಗಿತ
ಕಿಚ್ಚ ಸುದೀಪ್
Published On :

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ.

ಸುದೀಪ್ ಅಸಿಡಿಟಿ, ಜ್ವರದಿಂದ ಬಳಲುತ್ತಿದ್ದು ನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಜಕೇಸರಿ ಖ್ಯಾತಿಯ ಕೃಷ್ಣ ನಿರ್ದೇಶನದ ಹೆಬ್ಬಲಿ ಚಿತ್ರದ ಶೂಟಿಂಗ್ ನಲ್ಲಿ ಸುದೀಪ್ ಬ್ಯುಸಿಯಾಗಿದ್ದು, ಅನಾರೋಗ್ಯದ ಹಿನ್ನೆಲೆ ಚಿತ್ರೀಕರಣ ಸ್ಧಗಿತಗೊಳಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುದೀಪ್ ಅವರು ಅಭಿಮಾನಿಗಳು ಗಾಬರಿಪಡಬೇಕಾಗಿಲ್ಲ ಎಂದು ವಿನಂತಿಸಿಕೊಂಡಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.