ಶಿವಣ್ಣ ಅಭಿನಯದ ಟಗರು ಚಿತ್ರದಲ್ಲಿ ಧನಂಜಯ್ ವಿಲನ್
ಟಗರು ಚಿತ್ರದಿಂದ ಇನ್ನೊಂದು ಇಂಟರೆಸ್ಟಿಂಗ್ ಸುದ್ದಿ ಬಂದಿದೆ. ಅದೇನೆಂದರೆ, ಈ ಚಿತ್ರದಲ್ಲಿ ಶಿವರಾಜಕುಮಾರ್ ಅವರೆದುರು ವಿಲನ್ ಆಗಿ ಡೈರೆಕ್ಟರ್ಸ್ ಸ್ಪೆಷಲ್ ಖ್ಯಾತಿಯ ಧನಂಜಯ್...

ಬೆಂಗಳೂರು: ಶಿವರಾಜ್‌ಕುಮಾರ್ ಅಭಿನಯದ ಟಗರು ಚಿತ್ರದಿಂದ ಇನ್ನೊಂದು ಇಂಟರೆಸ್ಟಿಂಗ್ ಸುದ್ದಿ ಬಂದಿದೆ. ಅದೇನೆಂದರೆ, ಈ ಚಿತ್ರದಲ್ಲಿ ಶಿವರಾಜಕುಮಾರ್ ಅವರೆದುರು ವಿಲನ್ ಆಗಿ ಡೈರೆಕ್ಟರ್ಸ್ ಸ್ಪೆಷಲ್ ಖ್ಯಾತಿಯ ಧನಂಜಯ್ ಆಯ್ಕೆಯಾಗಿದ್ದಾರೆ.
ಈಗಾಗಲೇ ಸೂರಿ ಆಫರ್ ಕೊಟ್ಟಿದ್ದೂ ಆಗಿದೆ, ಅದಕ್ಕೆ ಧನಂಜಯ ಒಪ್ಪಿಕೊಂಡಿದ್ದೂ ಆಗಿದೆ. ಧನಂಜಯ್ ಅವರನ್ನ ಸೂರಿ ಭೇಟಿ ಮಾಡಿ ಈ ವಿಷಯ ತಿಳಿಸಿದಾಗ ಅವರು ತುಂಬಾ ಎಕ್ಸೈಟ್ ಆದರು, ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಧನಂಜಯ್ ಗೆ ಎಲ್ಲಾ ರೀತಿಯ ಪಾತ್ರಗಳಲ್ಲೂ ಅಭಿನಯಿಸಬೇಕೆಂಬ ಆಸೆಯಿದೆಯಂತೆ. ಪಾತ್ರದ ಬಗ್ಗೆ ವಿವರಣೆ ನೀಡಿದಾಗ ಧನಂಜಯ್ ಖುಷಿಯಿಂದ ಒಪ್ಪಿಕೊಂಡರು. ಈ ವಿಷಯವನ್ನು ಶಿವಣ್ಣ ಬಳಿ ಚರ್ಚಿಸಿದಾಗ ಶಿವಣ್ಣ ಫುಲ್ ಥ್ರಿಲ್ ಆದರು ಎಂದು ನಿರ್ದೇಶಕ ಸೂರಿ ತಿಳಿಸಿದ್ದಾರೆ.
ಈ ಚಿತ್ರದಲ್ಲಿ ಧನಂಜಯ್ ಅವರ ಪಾತ್ರವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ಧನಂಜಯ್ ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎಂಬುದು ಬಿಟ್ಟರೆ, ಮಿಕ್ಕಂತೆ ಬೇರೆ ಯಾವ ವಿಷಯವೂ ಗೊತ್ತಾಗಿಲ್ಲ. ಸದ್ಯಕ್ಕೆ ಸೂರಿ, ಧನಂಜಯ್ ಅವರ ಪಾತ್ರವನ್ನು ಗೌಪ್ಯವಾಗಿಟ್ಟಿದ್ದಾರೆ.
ಟಗರು - ಮೈಯಲ್ಲಾ ಪೊಗರು' ಚಿತ್ರವು ಆಗಸ್ಟ್ 21ರಂದು ಶುರುವಾಗಲಿದೆ. ಈ ಚಿತ್ರವನ್ನು ಕೆ.ಪಿ. ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ. ಇನ್ನು ಸೂರಿಯೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ರಚಿಸುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಮತ್ತು ಚರಣ್ ರಾಜ್ ಅವರ ಸಂಗೀತವಿದೆ. ಮಾನ್ವಿತಾ ಹರೀಶ್ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


