ಸಿನಿಮಾ ಸುದ್ದಿ

ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೊಪ್ಪಿಸುವಂತೆ ಪೋಷಕರ ಒತ್ತಾಯ

ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಟಿಯ ಪೋಷಕರು ..

ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೊಪ್ಪಿಸುವಂತೆ ಪೋಷಕರ ಒತ್ತಾಯ
ಪ್ರತ್ಯೂಷಾ ಬ್ಯಾನರ್ಜಿ
Published On :

ಜೆಮ್ ಶೆಡ್ ಪುರ; ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಟಿಯ ಪೋಷಕರು ಒತ್ತಾಯಿಸಿದ್ದಾರೆ.

ಪ್ರತ್ಯೂಷಾ ಸಾವಿನ ಹಿಂದೆ ರಾಹುಲ್ ರಾಜ್ ಕೈವಾಡವಿದ್ದು, ಆತನಿಗೆ ಶಿಕ್ಷೆಯಾಗಬೇಕು, ನಮಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿ ರಾಹುಲ್ ರಾಜ್ ಸಿಂಗ್ ಜಾಮೀನು ದೊರೆತಿರುವ ಕಾರಣ ಆತ ಆರಾಮವಾಗಿ ತಿರುಗಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ತಮಗೆ ನ್ಯಾಯ ದೊರಕಲು ಹೋರಾಟ ಮುಂದುವರಿಸುತ್ತಿದ್ದು, ಪ್ರತ್ಯೂಷಾ ಬ್ಯಾನರ್ಜಿ ಆತ್ನಹತ್ಯೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಲು ಸಹಿ ಸಂಗ್ರಹ ಅಭಿಯಾನ ಆರಂಭಿಸುತ್ತಿರುವುದಾಗಿ ಪ್ರತ್ಯೂಷಾ ಪೋಷಕರಾದ ಸೋಮ ಬ್ಯಾನರ್ಜಿ ಮತ್ತು ಶಂಕರ್ ಬ್ಯಾನರ್ಜಿ ತಿಳಿಸಿದ್ದಾರೆ.

ಮುಂಬಯಿನ ಬಾಟಾ ಚೌಕಿಯಲ್ಲಿ ಸಂಜೆ 5 ರಿಂದ ರಾತ್ರಿ 8 ಗಂಟೆವರೆಗೆ ಸಹಿ ಸಂಗ್ರಹ ಅಭಿಯಾನ ನಡೆಸಿದ್ದು, ಹೀಗಾಗಲೇ 700 ಮಂದಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ ಎಂದು ಪ್ರತ್ಯೂಷಾ ಪೋಷಕರು ತಿಳಿಸಿದ್ದಾರೆ.

ತಾವು ಈಗಾಗಲೇ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಮಹಿಳಾ ಮತ್ತು ಮಕ್ಕಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.