ಸಿನಿಮಾ ಸುದ್ದಿ

ಜುಲೈ 1 ರಿಂದ ವಿದೇಶದಲ್ಲಿ ಕಾಣಿಸಿಕೊಳ್ಳಲಿರುವ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು'

ದೇಶದಾದ್ಯಂತ ಬಿಡುಗಡೆ ಕಂಡ ಹೇಮಂತರಾವ್ ನಿರ್ದೇಶನದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದ್ದು ಈಗ ಅಂತಾರಾಷ್ಟ್ರೀಯ ಪ್ರೇಕ್ಷಕರಿಗೂ

ಜುಲೈ 1 ರಿಂದ ವಿದೇಶದಲ್ಲಿ ಕಾಣಿಸಿಕೊಳ್ಳಲಿರುವ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು'
'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾದ ಪೋಸ್ಟರ್
Published On :

ಬೆಂಗಳೂರು: ದೇಶದಾದ್ಯಂತ ಬಿಡುಗಡೆ ಕಂಡ ಹೇಮಂತರಾವ್ ನಿರ್ದೇಶನದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದ್ದು ಈಗ ಅಂತಾರಾಷ್ಟ್ರೀಯ ಪ್ರೇಕ್ಷಕರಿಗೂ ಕಾಣಿಸಿಕೊಳ್ಳಲು ಸಿದ್ಧವಾಗಿದೆ. ಜುಲೈ 1 ಕ್ಕೆ ನೆದರ್ಲ್ಯಾಮ್ಡ್ಸ್, ಜರ್ಮನಿ ಮತ್ತು ಇಂಗ್ಲೆಂಡಿನಲ್ಲಿ ಸಿನೆಮಾ ಬಿಡುಗಡೆಯಾಗಲಿದೆ.

"ನಂತರ ಇತರ ಯುರೋಪಿಯನ್ ದೇಶಗಳಲ್ಲಿ ಬಿಡುಗಡೆ ಮಾಡಲಿದ್ದು ತದನಂತರ ಅಮೆರಿಕಾ ಮತ್ತು ಇತರ ದೇಶಗಳಲ್ಲಿ ಸಿನೆಮಾ ಪ್ರದರ್ಶಿಸಲಿದ್ದೇವೆ. ಜಗದಗಲ ಹೆಚ್ಚೆಚ್ಚು ಪ್ರೇಕ್ಷಕರಿಗೆ ನಮ್ಮ ಚಿತ್ರ ತಲುಪಿಸಬೇಕೆಂಬ ಆಸೆ" ಎನ್ನುತ್ತಾರೆ ನಿರ್ದೇಶಕ ಹೇಮಂತ್.

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚೆಚ್ಚು ಸಿನೆರಸಿಕರಿಂದ ಪ್ರಚಾರ ಪಡೆದುಕೊಂಡ ಈ ಸಿನೆಮಾವನ್ನು ತಾರೆಯರು ಕೂಡ ಮೆಚ್ಚಿ ಹೊಗಳುತ್ತಿರುವುದು ವಿಶೇಷ. ಇತ್ತೀಚಿಗೆ ನಟ ಪ್ರಕಾಶ್ ರಾಜ್ ಮತ್ತು ಪುನೀತ್ ರಾಜಕುಮಾರ್ ಈ ಸಿನೆಮಾ ವೀಕ್ಷಿಸಿ ಹೇಮಂತ್ ರಾವ್ ಅವರ ನಿರ್ದೇಶನ ಮತ್ತು ಅನಂತ ನಾಗ್ ಅವರ ನಟನೆಯನ್ನು ಮನಸಾರೆ ಪ್ರಶಂಸಿಸಿದ್ದಾರೆ.

ಈ ಸಿನೆಮಾದಲ್ಲಿ ಶ್ರತಿ ಹರಿಹರನ್ ಮತ್ತಿ ರಕ್ಷಿತ್ ಶೆಟ್ಟಿ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.