ಮಾರಿಮುತ್ತು ಖ್ಯಾತಿಯ ಕನ್ನಡದ ನಟಿ ಸರೋಜಮ್ಮ ವಿಧಿವಶ
ಮಾರಿಮುತ್ತು ಖ್ಯಾತಿಯ ಕನ್ನಡದ ಖ್ಯಾತ ಹಿರಿಯ ನಟಿ ಸರೋಜಮ್ಮ ಶನಿವಾರ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ...

ಬೆಂಗಳೂರು: ಮಾರಿಮುತ್ತು ಖ್ಯಾತಿಯ ಕನ್ನಡದ ಖ್ಯಾತ ಹಿರಿಯ ನಟಿ ಸರೋಜಮ್ಮ ಶನಿವಾರ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಹಲವು ದಿನಗಳಿಂದ ಎದೆನೋವಿನಿಂದ ಬಳಲುತ್ತಿದ್ದ ನಟಿ ಸರೋಜಮ್ಮ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಿನ್ನೆ ತಡರಾತ್ರಿ 12 ಗಂಟೆ ಸುಮಾರಿನಲ್ಲಿ ಮತ್ತೆ ತೀವ್ರ ಎದೆನೋವು ಕಾಣಿಸಿಕೊಂಡು ಬಳಿಕ ಹೃದಾಯಾಘಾತವಾದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸರೋಜಮ್ಮ ಅವರು ನಿನ್ನೆ ರಾತ್ರಿ ಸುಮಾರು 1 ಗಂಟೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಸರೋಜಮ್ಮ ಅವರ ಪಾರ್ಥೀವ ಶರೀರವನ್ನು ಅವರ ಸ್ವಗೃಹದಲ್ಲಿ ಇಂದು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಚಿತ್ರರಂಗದ ಹಲವರು ಅಂತಿಮ ದರ್ಶನ ಪಡೆಯಲಿದ್ದಾರೆ.
ಖ್ಯಾತ ನಟ ನಿರ್ದೇಶಕ ಉಪೇಂದ್ರ ಅಭಿನಯಿಸಿ ನಿರ್ದೇಶಸಿದ್ದ "ಉಪೇಂದ್ರ" ಚಿತ್ರದಲ್ಲಿ ಮಾರಿಮುತ್ತು ಪಾತ್ರದಲ್ಲಿ ಅಭಿನಯಿಸಿದ್ದ ಸರೋಜಮ್ಮ ಅವರು ಅದೇ ಹೆಸರನಲ್ಲಿ ಖ್ಯಾತಿ ಗಳಿಸಿದ್ದರು. ಬಳಿಕ ರಮೇಶ್ ಅರವಿಂದ್ ಅಭಿನಯದ ಕುರಿಗಳು ಸಾರ್ ಕುರಿಗಳು, ಕೋತಿಗಳು ಸಾರ್ ಕೋತಿಗಳು ಚಿತ್ರದಲ್ಲಿ ಅಭಿನಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


