ಮಕ್ಕಳ ವೈಯಕ್ತಿಕ ಜೀವನದಲ್ಲಿ ತಲೆಹಾಕುವುದಿಲ್ಲ; ಸಲೀಂ ಖಾನ್
ತಮ್ಮ ಮಕ್ಕಳ ವೈಯಕ್ತಿಕ ಜೀವನದಲ್ಲಿ ತಲೆಹಾಕುವುದಿಲ್ಲ ಎಂದು ಅರ್ಬಾಜ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಹೇಳಿದ್ದಾರೆ...

ಮುಂಬೈ: ತಮ್ಮ ಮಕ್ಕಳ ವೈಯಕ್ತಿಕ ಜೀವನದಲ್ಲಿ ತಲೆಹಾಕುವುದಿಲ್ಲ ಎಂದು ಅರ್ಬಾಜ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಹೇಳಿದ್ದಾರೆ.
ಬಾಲಿವುಡ್ ಅಂಗಳದಲ್ಲಿ ಭಾರಿ ಸುದ್ದಿ ಮಾಡುತ್ತಿರವ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್‌ರ ವಿರಸ ದಾಂಪತ್ಯ ವಿಚ್ಛೇದನದೊಂದಿಗೆ ಮುಕ್ತಾಯವಾಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಇದೀಗ ಅರ್ಬಾಜ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣ ಮಾಡಿಕೊಟ್ಟಿದೆ.
ಮಗನ ವಿಚ್ಛೇದನ ಕುರಿತಂತೆ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸಲೀಂ ಖಾನ್ ಅವರು, ನಾನೊಬ್ಬ ಬರಹಗಾರ. ಇತರರ ಪ್ರೇಮ ಸಂಬಂಧ, ವಿಚ್ಛೇದನದ ಕುರಿತಂತೆ ನನ್ನನ್ನೇನು ಕೇಳಬೇಡಿ. ನನ್ನ ಮಕ್ಕಳ ವೈಯಕ್ತಿಕ ಜೀವನದಲ್ಲಿ ನಾನು ತಲೆಹಾಕುವುದಿಲ್ಲ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇದರಂತೆ ಮಲೈಕಾ ಅವರ ತಾಯಿ ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಅವರಿಬ್ಬರು ವಯಸ್ಕರು. ವೈಯಕ್ತಿಕ ಜೀವನದ ವಿಚಾರಗಳು ಹಾಗೂ ವ್ಯವಹಾರಗಳು ಅವರ ನಿರ್ಧಾರಕ್ಕೆ ಬಿಟ್ಟದ್ದು. ಇದರಲ್ಲಿ ನಾನೇನ್ನನ್ನೂ ಹೇಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಮಲೈಕ ಹಾಗೂ ಅರ್ಬಾಜ್ ದಂಪತಿಗಳಿಗೆ 13 ವರ್ಷದ ಮಗುವಿದ್ದು, ಇಬ್ಬರೂ ತಮ್ಮ 18 ವರ್ಷಗಳ ದಾಂಪತ್ಯವನ್ನು ಅಂತ್ಯಗೊಳಿಸಲು ಸಿದ್ಧರಾಗಿದ್ದಾರೆ. ಶೀಘ್ರದಲ್ಲೇ ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಇಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


