ಅಮೆರಿಕಾದಲ್ಲಿ ರಜೆಯ ಮಜ ಸವಿಯುತ್ತಿರುವ ರಜನೀಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ಜುಲೈ 1ರಂದು ತೆರೆ ಕಾಣಲು ಸಜ್ಜಾಗಿದೆ. ಈ ಮಧ್ಯೆ ರಜನಿಕಾಂತ್ ಕುಟುಂಬದೊಂದಿಗೆ ರಜೆ ಮಜಾ ಸವಿಯಲು ..

ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ಜುಲೈ 1ರಂದು ತೆರೆ ಕಾಣಲು ಸಜ್ಜಾಗಿದೆ. ಈ ಮಧ್ಯೆ ರಜನಿಕಾಂತ್ ಕುಟುಂಬದೊಂದಿಗೆ ರಜೆ ಮಜಾ ಸವಿಯಲು ಅಮೆರಿಕಾಗೆ ತೆರಳಿದ್ದಾರಂತೆ. ಸದ್ಯದ ಮಾಹಿತಿ ಪ್ರಕಾರ ರಜನಿಕಾಂತ್ ಯುಎಸ್‌ನಲ್ಲಿದ್ದಾರೆ.
ಇನ್ನೂ ರಜನಿಕಾಂತ್ 2.0 ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಕೆಲ ಶೂಟಿಂಗ್ ನಡೆಯುತ್ತಿದೆ. ಇನ್ನೂ ಚಿತ್ರದ ಶೂಟಿಂಗ್ ಆಗಬೇಕಿದೆ. ಕೆಲ ದಿನಗಳಿಂದ ರಜನಿ ಬ್ರೇಕ್ ತೆಗೆದುಕೊಳ್ಳಬೇಕು ಎಂದು ನಿರ್ಧರಿಸಿದ್ದರು. ಅದಕ್ಕಾಗಿ ಅವರು ಎರಡು ವಾರಗಳ ಕಾಲ ಅಮೇರಿಕಾಕ್ಕೆ ಹಾರಿದ್ದಾರೆ. ಅಲ್ಲಿ ಎರಡು ವಾರಗಳ ಕಾಲ ಇರಲಿದ್ದಾರಂತೆ. ಅದಾದ ಬಳಿಕ ಎಂದಿನಂತೆ ಮೆಗಾಸ್ಟಾರ್ ರಜನಿಕಾಂತ್ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿತ್ರದ ಒಂದೊಂದು ಪೋಸ್ಟರ್ ಸಾಕಷ್ಟು ಕ್ರೇಜ್ ಮೂಡಿಸಿದೆ. ಪೋಸ್ಚರ್‌ನಲ್ಲಿ ರಜನಿಕಾಂತ್‌ರ ಎಲ್ಲಾ ಆ್ಯಕ್ಷನ್‌ಗಳು ನೋಡುಗರನ್ನು ಮೋಡಿ ಮಾಡುವಂತಿವೆ. ಪಾ ರಂಜಿತ್ ನಿರ್ದೆಶನದ ರಜನಿಕಾಂತ್ ನಟಿಸಿರುವ ಕಬಾಲಿ ಚಿತ್ರದ ಶೂಟಿಂಗ್ ಮಲೇಷ್ಯಾದಲ್ಲಿ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


