ನಟ, ನಿರ್ದೇಶಕ ಶಾಂತಾರಾಮ್ ವಿಧಿವಶ
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಹಾಗೂ ನಿರ್ದೇಶಕ ವಿ.ಶಾಂತಾರಾಮ್(69) ಅವರು ಭಾನುವಾರ ನಿಧನರಾಗಿದ್ದಾರೆ.

Published On :
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಹಾಗೂ ನಿರ್ದೇಶಕ ಶಾಂತಾರಾಮ್(69) ಅವರು ಭಾನುವಾರ ನಿಧನರಾಗಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಂತಾರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಕೆ.ಆರ್. ಮುರಳಿಕೃಷ್ಣ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕೆ.ಬಾಲಚಂದರ್ ಅವರ 'ತಪ್ಪಿದ ತಾಳ' ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮರಟ್ಟು ಕಾಲೈ ಚಿತ್ರ ಸೇರಿದಂತೆ ವಿವಿಧ ಭಾಷೆಗಳ ಸುಮಾರು 40ಕ್ಕೂ ಹೆಚ್ಚು ಚಿತ್ರಗಳಲ್ಲಿ ಶಾಂತಾರಾಮ್ ಅವರು ಅಭಿನಯಿಸಿದ್ದರು.
ಶಾಂತಾರಾಮ್ ಅವರು ಕನ್ನಡದ ಮರಳಿ ಗೂಡಿಗೆ, ಬಾಳ ನೌಕೆ, ಹೃದಯ ಸಾಮ್ರಾಜ್ಯ, ಕರ್ಣನ ಸಂಪತ್ತು ಚಿತ್ರ ಸೇರಿದಂತೆ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


