ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ: ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದ ರಾಹುಲ್ ರಾಜ್ ಸಿಂಗ್?
ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ....

ಮುಂಬಯಿ: ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ.
ಆತ್ಮಹತ್ಯೆಗೂ ಮುನ್ನ ತನ್ನ ಗೆಳೆಯ ರಾಹುಲ್ ರಾಜ್ ಸಿಂಗ್ ಜೊತೆ ಪ್ರತ್ಯೂಷಾ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿದ್ದಳು. ಮೂರು ನಿಮಿಷಗಳ ಸಂಭಾಷಣೆಯಲ್ಲಿ, ಉದ್ಯಮಿಯೊಬ್ಬನ ಜೊತೆ ತಾನು ಹಾಸಿಗೆ ಹಂಚಿಕೊಂಡಿದ್ದ ವಿಷಯದ ಬಗ್ಗೆ ಪ್ರತ್ಯೂಷಾ ಮಾತನಾಡಿದ್ದಳು.
ನಾನು ಇಲ್ಲಿಗೆ ನಟಿಸಲು ಬಂದೆ, ಆದರೆ ನೀನು ನನ್ನನ್ನು ಇಲ್ಲಿಗೆ ಕರೆದು ತಂದು ನಿಲ್ಲಿಸಿದ್ದೀಯಾ, ನಿನಗೆ ಗೊತ್ತಿಲ್ಲ, ಇಂದು ನಾನು ಎಷ್ಟು ನೋವು ಅನುಭವಿಸುತ್ತಿದ್ದೇನೆ, ಎಂಥ ಕೆಟ್ಟ ಭಾವನೆ ನನಗೆ ಮೂಡುತ್ತಿದೆ ಎಂದು ನಿನಗೆ ತಿಳಿದಿಲ್ಲ, ಎಂದು ಹೇಳಿ ಫೋನ್ ಕಟ್ ಮಾಡಿದ್ದಾಳೆ. ಈ ಸಂಭಾಷಣೆ ಪ್ರತಿ ಪ್ರತ್ಯೂಷಾ ಪೋಷಕರ ಪರ ವಕೀಲ ನೀರಜ್ ಗುಪ್ತಾ ಅವರಿಗೆ ಸಿಕ್ಕಿದೆ ಎಂದು ವರದಿಯಾಗಿದೆ.
ಈ ಮಾತುಗಳಿಂದ ರಾಹುಲ್ ರಾಜ್ ಸಿಂಗ್ ಆಕೆಯನ್ನು ವೇಶ್ಯಾವಾಟಿಕೆಗೆ ನಡೆಸಲು ಒತ್ತಾಯಿಸುತ್ತಿದ್ದ ಎಂಬುದಕ್ಕೆ ಪುಷ್ಠಿ ನೀಡುತ್ತವೆ, ಎಂದು ಅವರು ಹೇಳಿದ್ದಾರೆ. ಈ ವರ್ಷದ ಏಪ್ರಿಲ್ 1 ರಂದು ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆಗೆ ಶರಣಾಗಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


