ಗೌತಮಿ ನಾನು ಬೇರೆಯಾಗಿರುವ ಬಗ್ಗೆ ನಾನು ಎಲ್ಲೂ ಹೇಳಿಕೆ ನೀಡಿಲ್ಲ: ಕಮಲ್ ಹಾಸನ್
ನಟಿ ಗೌತಮಿ ಅವರಿಂದ ಬೇರ್ಪಟ್ಟಿರುವ ವಿಚಾರವಾಗಿ ನಾನು ಎಲ್ಲೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ನಟ ಕಮಲ್ ಹಾಸನ್ ಸ್ಪಷ್ಟನೆ...

ಚೆನ್ನೈ: ನಟಿ ಗೌತಮಿ ಅವರಿಂದ ಬೇರ್ಪಟ್ಟಿರುವ ವಿಚಾರವಾಗಿ ನಾನು ಎಲ್ಲೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ನಟ ಕಮಲ್ ಹಾಸನ್ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳಲ್ಲಿ ವರದಿಯಾದಂತೆ ನಾನು ಈ ವಿಷಯವಾಗಿ ಎಲ್ಲಿಯೂ, ಯಾವುದೇ ಹೇಳಿಕೆ ನೀಡಿಲ್ಲ, ಕೆಲವರು ನನ್ನ ಹೆಸರನ್ನು ಬಳಸಿಕೊಂಡು , ನನ್ನ ಹೆಸರಿನಲ್ಲಿ ಹೇಳಿಕೆ ನೀಡುವ ಮೂಲಕ ಆಟವಾಡುತ್ತಿರುವುದು ಸರಿಯಲ್ಲ ಎಂದು ಕಮಲ್ ತಮಿಳಿನಲ್ಲಿ ಟ್ವೀಟ್ ಮಾಡಿದ್ದಾರೆ.
ಇನ್ನೂ ಈ ಸಂಬಂಧ ಸ್ಪಷ್ಟನೆ ನೀಡಿರುವ ನಟಿ ಹಾಗೂ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್, ನಾನು ಯಾರೋಬ್ಬರ ವಯಕ್ತಿಕ ಜೀವನದ ಬಗ್ಗೆ ಕಾಮೆಂಟ್ ಮಾಡುವುದಿಲ್ಲ, ಪ್ರತಿಯೊಬ್ಬರ ನಿರ್ಧಾರವನ್ನು ನಾನು ಗೌರವಿಸುತ್ತೇನೆ.ನನಗೆ ನನ್ನ ಕುಟುಂಬವಷ್ಟೇ ಮುಖ್ಯ. ನನ್ನ ಕುಟುಂಬವನ್ನು ನಾನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


