ಬಿಗ್ ಬಾಸ್ ಮನೆಯಲ್ಲಿ ಭೂತಕಾಟ? ಬೆಚ್ಚಿ ಬಿದ್ದ ಸ್ಪರ್ಧಿಗಳು!
ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಬ್ಬರಿಗೆ ಕನ್ನಡಿಯಲ್ಲಿ ವಿಚಿತ್ರ ಆಕೃತಿ ಕಾಣಿಸಿಕೊಂಡಿದ್ದು, ಭಯಭೀತರಾಗಿ ಕಿರುಚಿಕೊಂಡು ಕೆಳಕ್ಕೆ ಬಿದ್ದಿದ್ದಾರೆ. ಇದನ್ನು ಕಂಡ ಇತರ...

ಬೆಂಗಳೂರು: ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಬ್ಬರಿಗೆ ಕನ್ನಡಿಯಲ್ಲಿ ವಿಚಿತ್ರ ಆಕೃತಿ ಕಾಣಿಸಿಕೊಂಡಿದ್ದು, ಭಯಭೀತರಾಗಿ ಕಿರುಚಿಕೊಂಡು ಕೆಳಕ್ಕೆ ಬಿದ್ದಿದ್ದಾರೆ. ಇದನ್ನು ಕಂಡ ಇತರ ಸ್ಪರ್ಧಿಗಳು ಕೂಡ ಆತಂಕಕ್ಕೀಡಾಗಿದ್ದಾರೆ.
ಹೌದು, ಕಾರುಣ್ಯಾ ಮತ್ತು ಸಂಜನಾ ವಾಶ್ ರೂಂನಲ್ಲಿ ಮುಖ ತೊಳೆಯಲು ಹೋದ ಸಂದರ್ಭದಲ್ಲಿ ಕನ್ನಡಿಯಲ್ಲಿ ಆಕೃತಿಯೊಂದು ಕಾಣಿಸಿಕೊಂಡು ಇದರಿಂದ ಭಯಭೀತರಾಗಿ ಕಿರುಚಿಕೊಂಡು ಕೆಳಗೆ ಬಿದ್ದರು. ಈ ವೇಳೆ ಒಳಗೆ ಬಂದ ಇತರ ಸಹ ಸ್ಪರ್ಧಿಗಳು ಇದರಿಂದ ಆತಂಕಕ್ಕೀಡಾದ್ದಾರೆ.
ಬಿಡದಿ ಬಳಿ ಇರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಿರ್ಮಾಣವಾಗಿದ್ದು ಬಿಗ್ ಬಾಸ್ ಮನೆಯನ್ನು ಸಂಪೂರ್ಣವಾಗಿ ಕೆಡವಿ 13 ಕೋಟಿ ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಹೊಸದಾಗಿ ಮನೆ ನಿರ್ಮಿಸಲಾಗಿದೆ.
ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಆಕೃತಿಯನ್ನು ಕಂಡಿರುವುದು ಇದೀಗ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಅವರ ಕಂಡದ್ದು ನಿಜವಾಗಲು ಭೂತವಾ? ಅಥವಾ ಬಿಗ್ ಬಾಸ್ ಅವರಿಗೆ ನೀಡಿರುವ ವಿಶೇಷ ಟಾಸ್ಕ್ ಎಂಬು ಪ್ರಶ್ನೆ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


