ಭೂತಾಯಿ ಮಡಿಲು ಸೇರಿದ ಖಳನಟ ರಾಘವ್ ಉದಯ್
ಮಾಸ್ತಿಗುಡಿ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಹಾರಿ ಅಸುನೀಗಿದ್ದ ಖ್ಯಾತ ಖಳನಟ ರಾಘವ್ ಉದಯ್ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ...

Published On :
ಬೆಂಗಳೂರು: ಮಾಸ್ತಿಗುಡಿ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಹಾರಿ ಅಸುನೀಗಿದ್ದ ಖ್ಯಾತ ಖಳನಟ ರಾಘವ್ ಉದಯ್ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿದೆ.
ಬೆಂಗಳೂರಿನ ಬನಶಂಕರಿ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ರಾಘವ್ ಉದಯ್ ಅವರ ಅಂತ್ಯಸಂಸ್ಕಾರ ನೆರವೇರಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ನಿನ್ನೆ ಮಧ್ಯಾಹ್ನ ಉದಯ್ ಅವರ ಮೃತದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ನಿನ್ನೆ ರಾತ್ರಿ ಬೆಂಗಳೂರಿನ ಉದಯ್ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗಿದ್ದು ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿತ್ತು.
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಅಂತ್ಯಸಂಸ್ಕಾರಸ್ಯಾಂಡಲ್ವುಡ್Laid to Restಮಾಸ್ತಿ ಗುಡಿ ದುರಂತRaghav Udayರಾಘವ್ ಉದಯ್Masti gudi tragedy
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


