2019 ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಪವನ್ ಕಲ್ಯಾಣ್ ಪ್ರಕಟಣೆ
2019 ರಲ್ಲಿ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ...

ಅನಂತಪುರ: 2019 ರಲ್ಲಿ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪ್ರಕಟಿಸಿದ್ದಾರೆ.
ಗುರುವಾರ ಅನಂತಪುರದ ಸ್ಥಳೀಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಆದರೆ ಶಾಸಕ ಅಥವಾ ಸಂಸದ ಸ್ಥಾನಕ್ಕೆ ಸ್ಪರ್ಧಿಸುತ್ತಾರೋ ಎಂಬುದನ್ನು ಸ್ಪಷ್ಟ ಪಡಿಸಿಲ್ಲ. ಜನಸೇನಾ ಪಕ್ಷದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ತೆಲುಗು ದೇಶಂ ಪಕ್ಷ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನಂತಪುರದಲ್ಲಿ ಶೀಘ್ರವೇ ಪಕ್ಷದ ಕಚೇರಿ ಆರಂಭಿಸುತ್ತೇನೆ ಎಂದು ಪವನ್ ಕಲ್ಯಾಣ್ ತಿಳಿಸಿದರು. ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪವನ್ ಕಲ್ಯಾಣ್ ಅಭಿಮಾನಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


