ಸಿನಿಮಾ ಸುದ್ದಿ

ಮಾಸ್ತಿ ಗುಡಿ ದುರಂತ: ನಿರ್ದೇಶಕ ನಾಗಶೇಖರ್, ರವಿವರ್ಮಾ ಪೊಲೀಸರಿಗೆ ಶರಣು

ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಚಿತ್ರ ನಿರ್ದೇಶಕ ನಾಗಶೇಖರ್ ಮತ್ತು ಸಾಹಸ ನಿರ್ದೇಶಕ ರವಿವರ್ಮಾ ಮಾಗಡಿ ಪೊಲೀಸರಿಗೆ...

ಮಾಸ್ತಿ ಗುಡಿ ದುರಂತ: ನಿರ್ದೇಶಕ ನಾಗಶೇಖರ್, ರವಿವರ್ಮಾ ಪೊಲೀಸರಿಗೆ ಶರಣು
ನಾಗಶೇಖರ್, ರವಿವರ್ಮಾ
Published On :
ಮಾಗಡಿ(ರಾಮನಗರ): ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಚಿತ್ರ ನಿರ್ದೇಶಕ ನಾಗಶೇಖರ್ ಮತ್ತು ಸಾಹಸ ನಿರ್ದೇಶಕ ರವಿವರ್ಮಾ ಮಾಗಡಿ ಪೊಲೀಸರಿಗೆ ಶರಣಾಗಿದ್ದಾರೆ. 
ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಖಳನಟರಾದ ರಾಘವ್ ಉದಯ್ ಮತ್ತು ಅನಿಲ್ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಹೆಲಿಕಾಪ್ಟರ್ ನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತ ಸಂಬಂಧ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಾಹನ ನಿರ್ದೇಶಕ ರವಿವರ್ಮಾ, ಸಹ ನಿರ್ದೇಶಕ ಸಿದ್ದು, ಯೂನಿಟ್ ಮ್ಯಾನೇಜರ್ ಭರತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 
ಪ್ರಕರಣ ಸಂಬಂಧ ಈಗಾಗಲೇ ನಿರ್ಮಾಪಕ ಸುಂದರ್ ಪಿ ಗೌಡ ರಾಮನಗರ ಜೈಲಿನಲ್ಲಿದ್ದಾರೆ. ಇನ್ನು ತಲೆಮರೆಸಿಕೊಂಡಿದ್ದ ನಾಗಶೇಖರ್, ರವಿವರ್ಮಾ, ಸಿದ್ದು ಮೂವರು ಮಾಗಡಿ ಪೊಲೀಸರಿಗೆ ಶರಣಾಗಿದ್ದು, ಈ ವೇಳೆ ಮಾಸ್ತಿಗುಡಿ ಚಿತ್ರದಲ್ಲಿ ಅಭಿನಯಿಸಿರುವ ನಟ ದುನಿಯಾ ವಿಜಯ್ ಸಹ ಜತೆಗಿದ್ದರು. 
ತಾವರೆಗೆರೆ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ಪ್ರಕರಣ ದಾಖಲಾಗಿತ್ತು. ಆದರೆ ಸೂಕ್ತ ರೀತಿಯಲ್ಲಿ ತಾವರೆಕೆರೆ ಪೊಲೀಸರು ತನಿಖೆ ಕೈಗೊಳ್ಳದ ಹಿನ್ನೆಲೆಯಲ್ಲಿ ಮಾಗಡಿ ಪೊಲೀಸ್ ಠಾಣೆಗೆ ಪ್ರಕರಣಗೆ ವರ್ಗಾವಣೆಯಾಗಿತ್ತು. ಸದ್ಯ ಪೊಲೀಸರಿಗೆ ಚಿತ್ರತಂಡದವರು ಶರಣಾಗಿದ್ದು ಅವರನ್ನು ವಿಚಾರಣೆ ನಡೆಸಿದ ಬಳಿಕ ಮಾಗಡಿ ಪೊಲೀಸರು ರಾಮನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.