ತಮಿಳು ನಟಿ ಸುಪರ್ಣ ಆನಂದ್ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ
ತಮಿಳು ನಟಿ ಸುಪರ್ಣ ಆನಂದ್ ಚೆನ್ನೈನಲ್ಲಿರುವ ತನ್ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ...

ತಮಿಳು ನಟಿ ಸುಪರ್ಣ ಆನಂದ್ ಚೆನ್ನೈನಲ್ಲಿರುವ ತನ್ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ನಟಿ ವಾಸವಿದ್ದ ಅಪಾರ್ಟ್ ಮೆಂಟ್ ಮನೆ ಕಳೆದ ಮೂರು ದಿನಗಳಿಂದ ಲಾಕ್ ಆಗಿತ್ತು. ಆದರೆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಟಿಯ ಮನೆಯ ಬಾಗಿಲು ಒಡೆದು ನೋಡಿದಾಗ ಸುಪರ್ಣ ಆನಂದ್ ಶವ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.
ಘಟನಾ ಸ್ಥಳದಲ್ಲಿ ಪೊಲೀಸರು ಡೆಟ್ ನೋಟ್ ವಶಪಡಿಸಿಕೊಂಡಿದ್ದಾರೆ. ಇನ್ನು ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಸುಪರ್ಣ ಆನಂದ್ ಸಾವಿನ ಸುದ್ದಿ ತಮಿಳು ಕಿರುತೆರೆ ಚಿತ್ರರಂಗವನ್ನು ದಂಗುಬಡಿಸಿದೆ. ಕಿರುತೆರೆ ನಿರೂಪಕಿಯಾಗಿ ವೃತ್ತಿಜೀವನ ಆರಂಭಿಸಿದ್ದ ಸುಪರ್ಣ ಆನಂದ್ ಹಲವು ಧಾರವಾಹಿಗಳಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದರು. ಇನ್ನು ಹಲವು ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


