ಮಾಸ್ತಿ ಗುಡಿ ದುರಂತ: ಐವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ...

Published On :
ರಾಮನಗರ: ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ ನಿರ್ದೇಶಕ, ಸಾಹಸ ನಿರ್ದೇಶಕ ಹಾಗೂ ಯುನಿಟ್ ಮ್ಯಾನೇಜರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 3ರ ವರೆಗೆ ವಿಸ್ತರಿಸಲಾಗಿದೆ.
ಮಾಸ್ತಿ ಗುಡಿ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ಸಹ ನಿರ್ದೇಶಕ ಸಿದ್ದು, ನಿರ್ಮಾಪಕ ಸುಂದರ್ ಪಿ.ಗೌಡ ಹಾಗೂ ಯುನಿಟ್ ಮ್ಯಾನೇಜರ್ ಭರತ್ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಮಾಗಡಿ ತಾಲೂಕಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ರಾಮನಗರದ 3ನೇ ಹೆಚ್ಚುವರಿ ನ್ಯಾಯಾಧೀಶ ಗೋಪಾಲಕೃಷ್ಣ ಅವರು, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದ್ದಾರೆ.
ಈ ಮಧ್ಯೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


