ಸಿನಿಮಾ ಸುದ್ದಿ

ಕಿರುತೆರೆ ನಟ ಹರೀಶ್ ಅಕಾಲಿಕ ನಿಧನ

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ...

ಕಿರುತೆರೆ ನಟ ಹರೀಶ್ ಅಕಾಲಿಕ ನಿಧನ
ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್
Published On :

ಬೆಂಗಳೂರು: ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ.

ಹಲವು ದಿನಗಳಿಂದಲೂ ಡೆಂಗ್ಯೂ ಮತ್ತು ಕಾಮಾಲೆ ರೋಗದಿಂದ ಬಳಲುತ್ತಿದ್ದ ನಟ ಹರೀಶ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ್ದ ಹರೀಶ್ ಅವರು, ಕಲರ್ಸ್ ಕನ್ನಡ ವಾಹನಿಯಲ್ಲಿ ಪ್ರಸಾರವಾಗುತ್ತಿರುವ ಓಂ ಶಕ್ತಿ ಓಂ ಶಾಂತಿ ಧಾರಾವಾಹಿಯಲ್ಲೂ ಪ್ರಮಖ ಪಾತ್ರ ನಿರ್ವಹಿಸುತ್ತಿದ್ದರು.

ಹರೀಶ್ ಅವರ ಅಕಾಲಿಕ ಮೃತ್ಯುವಿಗೆ ಕಿರುತೆರೆ ಕಂಬನಿ ಮಿಡಿದಿದ್ದು, ಕುಟುಂಬಸ್ಥರು ಮೃತ ದೇಹವನ್ನು ಹುಟ್ಟೂರಾದ ಚಿತ್ರದುರ್ಗಕ್ಕೆ ಕೊಂಡೊಯ್ದಿದ್ದಾರೆ. ಆರ್ ಆರ್ ನಗರದಲ್ಲಿ ಹರೀಶ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.