ಸಿನಿಮಾ ಸುದ್ದಿ

ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರ ಪ್ರದರ್ಶನ ಮಾಡದಿರಲು ವಿತರಕರು ನಿರ್ಧಾರ

ಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರ ಇಂದು ದೇಶಾದ್ಯಂತ ತೆರಕಾಣುತ್ತಿದ್ದು ತಮಿಳುನಾಡಿನಲ್ಲಿ ಚಿತ್ರವನ್ನು ಪ್ರದರ್ಶನ ಮಾಡದಿರಲು ವಿತರಕರು...

ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರ ಪ್ರದರ್ಶನ ಮಾಡದಿರಲು ವಿತರಕರು ನಿರ್ಧಾರ
ಮುಂಗಾರು ಮಳೆ-2
Published On :
ಬೆಂಗಳೂರು: ಶಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರ ಇಂದು ದೇಶಾದ್ಯಂತ ತೆರಕಾಣುತ್ತಿದ್ದು ತಮಿಳುನಾಡಿನಲ್ಲಿ ಚಿತ್ರವನ್ನು ಪ್ರದರ್ಶನ ಮಾಡದಿರಲು ವಿತರಕರು ನಿರ್ಧರಿಸಿದ್ದಾರೆ. 
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರು, ಮತ್ತಷ್ಟು ಬಿಡುವಂತೆ ಇನ್ನಿಲ್ಲದಂತೆ ಒತ್ತಡ ಹಾಕುತ್ತಿರುವ ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರವನ್ನು ಇಂದು ಪ್ರದರ್ಶನ ಮಾಡದಿರಲು ವಿತರಕರು ತೀರ್ಮಾನಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಶಶಾಂಕ್ ಅವರು, ಕಾವೇರಿಗಾಗಿ ನಿನ್ನೆ ಕರ್ನಾಟಕ ಬಂದ್ ಮಾಡಲಾಗಿತ್ತು. ಇದಕ್ಕೆ ಹಲವು ಕನ್ನಡ ಪರ ಸಂಘಟನೆಗಳು, ಚಿತ್ರರಂಗ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿತರಕರು ಸ್ವಯಂ ಪ್ರೇರಿತರಾಗಿ ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರವನ್ನು ಬಿಡುಗಡೆ ಮಾಡದಿರಲು ತೀರ್ಮಾನಿಸಿದ್ದಾರೆ ಎಂದರು. 
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಬಂದ್ ಹಿನ್ನೆಲೆ ಶುಕ್ರವಾರ ಬದಲಿಗೆ ಶನಿವಾರ ಬಿಡುಗಡೆಯಾಗುತ್ತಿದ್ದು, ಭರ್ಜರಿ ಟ್ರೈಲರ್ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.