ತೀವ್ರ ಜ್ವರದಿಂದ ಬಳಲುತ್ತಿರುವ ನಟ ಧ್ರುವ ಸರ್ಜಾ ಆಸ್ಪತ್ರೆಗೆ ದಾಖಲು
ಸೂಪರ್ ಹಿಟ್ ಅದ್ಧೂರಿ, ಬಹದ್ದೂರ್ ಚಿತ್ರದ ನಾಯಕ ಧ್ರುವ ಸರ್ಜಾ ತೀವ್ರ ಜ್ವರದಿಂದ ಬಳಲುತ್ತಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ...

Published On :
ಬೆಂಗಳೂರು: ಸೂಪರ್ ಹಿಟ್ ಅದ್ಧೂರಿ, ಬಹದ್ದೂರ್ ಚಿತ್ರದ ನಾಯಕ ಧ್ರುವ ಸರ್ಜಾ ತೀವ್ರ ಜ್ವರದಿಂದ ಬಳಲುತ್ತಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ನಿರ್ದೇಶನದ ಭರ್ಜರಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ನಟ ಧ್ರುವ ಸರ್ಜಾ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ರೈನ್ ಎಫೆಕ್ಟ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೆ ಜ್ವರಕ್ಕೆ ಕಾರಣ ಅಂತ ಹೇಳಲಾಗುತ್ತಿದೆ.
ಕನಕಪುರ ರಾಮಗೊಂಡ್ಲು ಬಳಿ ಚಾಮುಂಡೇಶ್ವರಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿತ್ತು. ಧ್ರುವ ಸರ್ಜಾಗೆ ರಚಿತಾ ರಾಮ್ ಜೋಡಿಯಾಗಿ ಅಭಿನಯಿಸುತ್ತಿರುವ ಭರ್ಜರಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿತ್ತು.
ಬಹದ್ದೂರ್ ಚಿತ್ರ ನಿರ್ದೇಶಿಸಿದ್ದ ಚೇತನ್ ಕುಮಾರ್ ಭರ್ಜರಿ ಚಿತ್ರವನ್ನು ನಿರ್ದೇಶಿಸುತ್ತಿದ್ದು ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSandalwoodಜ್ವರDhruva sarjaಧ್ರುವ ಸರ್ಜಾಭರ್ಜರಿಸ್ಯಾಂಡಲ್ವುಡ್Manipalಮಣಿಪಾಲ್Barjarihealth upset
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


