ಬಿಗ್ ಬಾಸ್ ವಿಜೇತ 'ಒಳ್ಳೆ ಹುಡ್ಗ' ಪ್ರಥಮ್ ಮನೆಯಲ್ಲಿ ಕಳ್ಳತನ
ಕನ್ನಡ ಬಿಗ್ ಬಾಸ್ ಸೀಸನ್-4ನ ವಿಜೇತ ಪ್ರಥಮ್ ಅವರ ಮನೆಯಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ಪ್ರಥಮ್ ಅವರ ...

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್-4ನ ವಿಜೇತ ಪ್ರಥಮ್ ಅವರ ಮನೆಯಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ಪ್ರಥಮ್ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳತನ ಮಾಡಲಾಗಿದೆ ಎಂದು ನಂದಿನಿ ಲೇಔಟ್ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶೋ ಮುಗಿಸಿಕೊಂಡು ಮನೆಗೆ ಬಂದಾಗ ಕಳ್ಳತನವಾಗಿರುವುದು ತಿಳಿದು ಬಂದಿದೆ. ಮನೆಯ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಲ್ಯಾಪ್ ಟಾಪ್, ಮೊಬೈಲ್, ಮತ್ತು 30 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ.
ಪ್ರಥಮ್ ನೀಡಿದ ಮಾಹಿತಿ ಅನ್ವಯ ದೂರು ದಾಖಲಿಸಿಕೊಂಡಿರುವ ಪೊಲೀಸರು ಅಕ್ಕಪಕ್ಕದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಥಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಚಿತ್ರ 'ದೇವ್ರವ್ನೆ ಬುಡು ಗುರು' ಸಿನಿಮಾದ ಹಾರ್ಡ್ ಡಿಸ್ಕ್ ಅನ್ನೂ ಸಹ ಕಳ್ಳತನ ಮಾಡಿದ್ದಾರೆ ಎಂದು ಪ್ರಥಮ್ ಹೇಳಿದ್ದಾರೆ.
ಅಕುಲ್ ಬಾಲಾಜಿ ನಾಯಕರಾಗಿರುವ ಈ ಚಿತ್ರವನ್ನು ಪ್ರಥಮ್ ನಿರ್ದೇಶಿಸುತ್ತಿದ್ದರು. ಕಳೆದ ಮೂರುವರೆ ವರ್ಷಗಳಿಂದ ಚಿತ್ರದ ಕೆಲಸ ನಡೆಯುತ್ತಿತ್ತು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


