ಮಂಗಳೂರಿಗೆ ಬಂದ ನಟಿ ಐಶ್ವರ್ಯಾ ರೈ: ಸಹಸ್ರಲಿಂಗೇಶ್ವರ ದೇವಾಲಯಲ್ಲಿ ತಂದೆಯ ಶ್ರಾದ್ಧ ಕಾರ್ಯ
ಬಾಲಿವುಡ್ ನಟಿ ಐಶ್ವರ್ಯಾ ರೈ ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಉಪ್ಪಿನಂಗಡಿಗೆ ಆಗಮಿಸಿ, ಇತ್ತೀಚೆಗೆ ನಿಧನರಾದ ತಮ್ಮ ತಂದೆ ಕೃಷ್ಣರಾಜ್ ರೈ ಅವರ ಅಸ್ಥಿ ....

Published On :
ಮಂಗಳೂರು: ಬಾಲಿವುಡ್ ನಟಿ ಐಶ್ವರ್ಯಾ ರೈ ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಉಪ್ಪಿನಂಗಡಿಗೆ ಆಗಮಿಸಿ, ಇತ್ತೀಚೆಗೆ ನಿಧನರಾದ ತಮ್ಮ ತಂದೆ ಕೃಷ್ಣರಾಜ್ ರೈ ಅವರ ಅಸ್ಥಿ ವಿಸರ್ಜನೆ ಕಾರ್ಯದಲ್ಲಿ ಪಾಲ್ಗೊಂಡರು.
ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ತಮ್ಮ ಸಬೋದರ ಆದಿತ್ಯ ರೈ ಜೊತೆ ಶ್ರಾದ್ಧ ಕಾರ್ಯ ನೆರವೇರಿಸಿದರು. ತುಳುನಾಡಿನ ಸಂಪ್ರದಾಯದಂತೆ ಉಪ್ಪಿನಂಗಡಿಯ ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಕ್ಷೇತ್ರದಲ್ಲಿ ಅಸ್ಥಿ ವಿಸರ್ಜನೆ ಮಾಡಿದರು.
ಈ ವೇಳೆ ಪುತ್ರಿ ಆರಾಧ್ಯ, ತಾಯಿ ವೃಂದಾ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಮಾರ್ಚ್ 19 ರಂದು ಐಶ್ವರ್ಯಾ ರೈ ಅವರ ತಂದೆ ಕೃಷ್ಣ ರಾಜ್ ರೈ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


