ಅನೂಪ್ ಸಾ ರಾ ಗೋವಿಂದು ಅವರನ್ನು ನಿರ್ದೇಶಿಸಲಿರುವ ಗುರುಪ್ರಸಾದ್?
'ಡವ್' ಸಿನೆಮಾದ ಮೂಲಕ ಪಾದಾರ್ಪಣೆ ಮಾಡಿದ ಅನೂಪ್ ಸಾ ರಾ ಗೋವಿಂದು ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಈಗ ನಿರ್ದೇಶಕ ಗುರುಪ್ರಸಾದ್ ಅವರನ್ನು ನಿರ್ದೇಶಿಸಲಿದ್ದಾರೆ ಎಂಬ

Published On :
ಬೆಂಗಳೂರು: 'ಡವ್' ಸಿನೆಮಾದ ಮೂಲಕ ಪಾದಾರ್ಪಣೆ ಮಾಡಿದ ಅನೂಪ್ ಸಾ ರಾ ಗೋವಿಂದು ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಈಗ ನಿರ್ದೇಶಕ ಗುರುಪ್ರಸಾದ್ ಅವರನ್ನು ನಿರ್ದೇಶಿಸಲಿದ್ದಾರೆ ಎಂಬ ಸುದ್ದಿ ನಟನಿಗೆ ದೊಡ್ಡ ಬ್ರೇಕ್ ನೀಡಲಿದೆ ಎನ್ನಲಾಗಿದೆ.
'ಮಠ', 'ಎದ್ದೇಳು ಮಂಜುನಾಥ' ಸಿನೆಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿ ಇತ್ತೀಚೆಗಷ್ಟೇ 'ಎರಡನೇ ಸಲ' ಸಿನೆಮಾ ಬಿಡುಗಡೆ ಮಾಡಿದ್ದ ಗುರುಪ್ರಸಾದ್ ಮುಂದಿನ ಸಿನೆಮಾಗೆ ಅನೂಪ್ ಅವರ ಜೊತೆಗೆ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ.
ಇನ್ನು ಅಧಿಕೃತ ಘೋಷಣೆ ಹೊರಹೊಮ್ಮಬೇಕಿದ್ದರು, ಬಲ್ಲ ಮೂಲಗಳಿಂದ ಈ ಸಿನೆಮಾದ ಶೀರ್ಷಿಕೆ 'ಅದೆಮಾ' ಎಂದು ಹೆಸರಿಸಲಾಗಿದೆ ಎನ್ನಲಾಗಿದೆ.
ಈಮಧ್ಯೆ ಅನೂಪ್ ತಮ್ಮ ಎರಡನೇ ಚಿತ್ರ 'ಸಾಗುವ ಹಾದಿಯಲ್ಲಿ' ಚಿತ್ರೀಕರಣ ಮುಗಿಸಿದ್ದು, ಅದರ ಆಡಿಯೋವನ್ನು ಇತ್ತೀಚೆಗಷ್ಟೇ ನಟ ಸುದೀಪ್ ಬಿಡುಗಡೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


