ಸಿನಿಮಾ ಸುದ್ದಿ

ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುತ್ತದೆ : ಬಾಹುಬಲಿ-2 ನಿರ್ಮಾಪಕರ ವಿಶ್ವಾಸ

ಬಾಹುಬಲಿ-2 ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ವಿವಾದ ಶೀಘ್ರವೇ ...

ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುತ್ತದೆ : ಬಾಹುಬಲಿ-2 ನಿರ್ಮಾಪಕರ ವಿಶ್ವಾಸ
ಬಾಹುಬಲಿ -2 ಸಿನಿಮಾ ಪೋಸ್ಟರ್
Published On :
ಬೆಂಗಳೂರು: ಬಾಹುಬಲಿ-2 ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ವಿವಾದ ಶೀಘ್ರವೇ ಬಗೆಹರಿಯಲಿದೆ ಎಂದು ನಿರ್ಮಾಪಕ ಶೋಭು ಯರ್ಲಗದ್ದ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇದೊಂದು ಸೂಕ್ಷ್ಮ ಪ್ರಕರಣ, ಹೀಗಾಗಿ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂದು ಹೇಳಿರುವ ಅವರು, ಆದರೆ ಸಮಸ್ಯೆಯನ್ನು ಸೌಹರ್ದಯುತವಾಗಿ ಬಗೆಹರಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸಮಸ್ಯೆ ಬಗೆಹರಿಸುವ ಸಂಬಂಧ ಕನ್ನಡ ಪರ ಸಂಘಟನೆಗಳ ಜೊತೆ ಚರ್ಚಿಸಿದಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದುವರೆಗೂ ಮಾತುಕತೆ ಬಗ್ಗೆ ನಿರ್ಧರಿಸಿಲ್ಲ, ಆದರೆ ಯಾರೋಬ್ಬರ ಬಗ್ಗೆ ನಾನು ಹೇಳಿಕೆ ನೀಡುವುದಿಲ್ಲ ಎಂದು ಶೋಭು ಯರ್ಲಗುಡ್ಡ ತಿಳಿಸಿದ್ದಾರೆ.
ಒಂದು ವೇಳೆ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಯಾಗದಿದ್ದರೇ ಯಾವ ರೀತಿ ನಷ್ಟವಾಗುತ್ತದೆ ಎಂಬದಕ್ಕೆ ಉತ್ತರಿಸಿದ ಅವರು, ಅದರ ಬಗ್ಗೆ ನಿಜವಾಗಿಯೂ ನನಗೆ ಗೊತ್ತಿಲ್ಲ, ಮೊದಲು ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸುತ್ತೇವೆ ಎಂದಿದ್ದಾರೆ.
ಬಾಹಬಲಿ-2 ಚಿತ್ರದಲ್ಲಿ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಕೆಲ ವರ್ಷಗಳ ಹಿಂದೆ  ಕಾವೇರಿ ವಿವಾದ ಸಂಬಂಧ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು, ಅದಕ್ಕಾಗಿ ಸತ್ಯರಾಜ್  ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ.
ಬಾಹುಬಲಿ ಸಿನಿಮಾ ಬಿಡುಗಡೆ ಸಂಬಂಧ ನಿರ್ದೇಶಕ ರಾಜಮೌಳಿ ಏನು ಹೇಳುತ್ತಾರೆ ಎಂದು ಸಹಾಯಕ ನಿರ್ದೇಶಕ ಶ್ರೀನಿವಾಸ್ ರಾವ್ ಉತ್ತರಿಸಿದ್ದಾರೆ. ನಿರ್ಮಾಪಕ ಯರ್ಲಗಡ್ಡ ಯಾವ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಿರ್ದೇಶಕರು ಒಪ್ಪುತ್ತಾರೆ ಎಂದು ಹೇಳಿದ್ದಾರೆ.
ಸದ್ಯ ನಿರ್ದೇಶಕ ರಾಜಮೌಳಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ ಅವರು, ವಿವಾದ ಈಗ ಉದ್ಭವವಾಗಲು ಕಾರಣ ಏನು ಎಂದು ನನಗೆ ತಿಳಿಯುತ್ತಿಲ್ಲ, ಸತ್ಯರಾಜ್ ಬಾಹುಬಲಿ ಸಿನಿಮಾದ ಮೊದಲ ಭಾಗದಲ್ಲಿ ಅಭಿನಯಿಸಿದ್ದರು, ಆದರೆ ಆ ವೇಳೆ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರೇ? ಆದರೆ ಈ ಸಮಯದಲ್ಲಿ ವಿಷಯವನ್ನು ಮತ್ತಷ್ಟು ಕೆರಳಿಸುತ್ತಿರುವುದು ಸರಿಯಲ್ಲ ಎಂದು ಶ್ರೀನಿವಾಸ್ ರಾವ್ ಹೇಳಿದ್ದಾರೆ. ಬಾಹುಬಲಿ-2 ಸಿನಿಮಾ ಏಪ್ರಿಲ್ 28 ರಂದು ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.