ಸಿನಿಮಾ ಸುದ್ದಿ

ಹಿಂದೂಗಳ ಭಾವನೆಗೆ ಧಕ್ಕೆ ಆರೋಪ, ನಟ ಕಮಲ್ ಹಾಸನ್ ಗೆ ಕೋರ್ಟ್ ಸಮನ್ಸ್

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಟ ಕಮಲ್....

ಹಿಂದೂಗಳ ಭಾವನೆಗೆ ಧಕ್ಕೆ ಆರೋಪ, ನಟ ಕಮಲ್ ಹಾಸನ್ ಗೆ ಕೋರ್ಟ್ ಸಮನ್ಸ್
ಕಮಲ್ ಹಾಸನ್
Published On :
ತಿರುನೆಲ್ವಲಿ: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಟ ಕಮಲ್ ಹಾಸನ್ ಅವರಿಗೆ ಶುಕ್ರವಾರ ಕೋರ್ಟ್ ಸಮನ್ಸ್ ನೀಡಿದೆ.
ಮಹಾಭಾರತದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 5ರಂದು ವಿಚಾರಣೆಗೆ ಹಾಜರಾಗುವಂತೆ ವಲ್ಲಿಯೂರ್‌ ನ್ಯಾಯಾಲಯ ಕಮಲ್ ಹಾಸನ್ ಅವರಿಗೆ ಇಂದು ಸಮನ್ಸ್‌ ಜಾರಿ ಮಾಡಿದೆ.
ಮಾರ್ಚ್‌ 12ರಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಮಲ್‌ ಹಾಸನ್ ಅವರು, ಒಬ್ಬ ಮಹಿಳೆಯನ್ನು (ದ್ರೌಪದಿ) ಜೂಜಿಗೆ ಪಣವಾಗಿಟ್ಟ ಕತೆಯಿರುವ ಪುಸ್ತಕವನ್ನು ಈ ದೇಶ ಪೂಜನೀಯ ಎಂದು ಭಾವಿಸಿದೆ ಎಂಬರ್ಥದ ಹೇಳಿಕೆ ನೀಡಿದ್ದರು.
‘ಮಹಾಭಾರತದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕಮಲ್‌ ಹಾಸನ್‌ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಹಿಂದೂ ಮಕ್ಕಳ್‌ ಕಟ್ಚಿ ಸಂಘಟನೆಯು ಚೆನ್ನೈ ಪೊಲೀಸರಿಗೆ ದೂರು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.