ತಮಿಳುನಾಡಿನಾಡಿನಾದ್ಯಂತ ಬಾಹುಬಲಿ 2 ಮಾರ್ನಿಂಗ್ ಶೋ ರದ್ದು!
ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡಿನಾದ್ಯಂತ ಬಾಹುಬಲಿ-2 ಚಿತ್ರದ ಮಾರ್ನಿಂಗ್ ಶೋ ಪ್ರದರ್ಶನ ರದ್ದಾಗಿದೆ ಎಂದು ತಿಳಿದುಬಂದಿದೆ.

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡಿನಾದ್ಯಂತ ಬಾಹುಬಲಿ-2 ಚಿತ್ರದ ಮಾರ್ನಿಂಗ್ ಶೋ ಪ್ರದರ್ಶನ ರದ್ದಾಗಿದೆ ಎಂದು ತಿಳಿದುಬಂದಿದೆ.
ಬಹು ನಿರೀಕ್ಷಿತ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ2 ಚಿತ್ರ ಶುಕ್ರವಾರ ವಿಶ್ವಾದ್ಯಂತ ಬಿಡುಗಡೆಯಾಗಿದ್ದರೂ, ಚಿತ್ರದ ನಿರ್ಮಾಪಕರು ಹಾಗೂ ತಮಿಳುನಾಡು ವಿತರಕರ ನಡುವಿನ ಆರ್ಥಿಕ ಬಿಕ್ಕಟ್ಟಿನಿಂದಾಗಿ ತಮಿಳುನಾಡಿನಲ್ಲಿ ಮಾರ್ನಿಂಗ್ ಪ್ರದರ್ಶನ ರದ್ದಾಗಿದೆ ಎಂದು ತಿಳಿದುಬಂದಿದೆ. ವಾಣಿಜ್ಯ ಬಿಕ್ಕಟ್ಟು ಪರಿಹಾರವಾಗದ ಹಿನ್ನಲೆಯಲ್ಲಿ ಚಿತ್ರ ನಿರ್ಮಾಪಕರು ತಮಿಳುನಾಡಿನಲ್ಲಿ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿಲ್ಲ. ಹೀಗಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ಯಾವುದೇ ಥಿಯೇಟರ್ ನಲ್ಲೂ ಚಿತ್ರದ ಪ್ರದರ್ಶನ ಆರಂಭವಾಗಿಲ್ಲ ಎಂದು ತಿಳಿದುಬಂದಿದೆ.
ತಮಿಳುನಾಡಿನ ಕೊಯಂಬೇಡುವಿನಲ್ಲಿರುಪ ರೋಹಿಣಿ ಚಿತ್ರಮಂದಿರದಲ್ಲಿ ಬೆಳಗ್ಗೆ 3 ಗಂಟೆಯಿಂದಲೇ ನೂರಾರು ಮಂದಿ ಚಿತ್ರದ ಟಿಕೆಟ್ ಖರೀದಿಗಾಗಿ ಸರತಿ ಸಾಲಲ್ಲಿ ನಿಂತಿದ್ದರಾದರೂ. ಟಿಕೆಟ್ ಮಾರಾಟವಿಲ್ಲದೇ ಹೈರಾಣಾಗಿದ್ದಾರೆ. ಚಿತ್ರ ಪ್ರದರ್ಶನಕ್ಕೆ ನಿರ್ಮಾಪಕರು ಅನುಮತಿ ನೀಡದ ಹಿನ್ನಲೆಯಲ್ಲಿ ಚಿತ್ರ ಪ್ರದರ್ಶನ ಆರಂಭಿಸಿಲ್ಲ ಎಂದು ಚಿತ್ರ ಮಂದಿರ ಸಿಬ್ಬಂದಿ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


