ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಲಿರುವ ದೀಪಿಕಾ ಪಡುಕೋಣೆ, ಸೋನಮ್ ಕಪೂರ್, ಐಶ್ವರ್ಯಾ ರೈ ಬಚ್ಚನ್
ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಸೋನಮ್ ಕಪೂರ್, ಐಶ್ವರ್ಯಾ ರೈ ಬಚ್ಚನ್ ಮುಂದಿನ ತಿಂಗಳು ನಡೆಯಲಿರುವ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಲಿದ್ದಾರೆ.

Published On :
ಮುಂಬೈ: ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಸೋನಮ್ ಕಪೂರ್, ಐಶ್ವರ್ಯಾ ರೈ ಬಚ್ಚನ್ ಮುಂದಿನ ತಿಂಗಳು ನಡೆಯಲಿರುವ 70 ನೇ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಲಿದ್ದಾರೆ.
ಐಶ್ವರ್ಯಾ ರೈ ಹಾಗೂ ಸೋನಂ ಕಪೂರ್ ಅನುಕ್ರಮವಾಗಿ 2002, 2011 ರಲ್ಲಿ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಿದ್ದರೆ, ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಲಿದ್ದಾರೆ. ಹಾಲಿವುಡ್ ನ ಸೆಲೆಬ್ರಿಟಿಗಳಾದ ಜುಲಿಯನ್ ಮೂರೆ ಮತ್ತು ಇವಾ ಲೋಂಗೋರಿಯಾ ಸಹ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಲಿದ್ದು, ಬ್ರಾಂಡ್ ಲೋರಿಯಲ್ ಪ್ಯಾರಿಸ್ ಕಲೆಕ್ಷನ್ ನಿಂದ ಇತ್ತೀಚಿನ ಟ್ರೆಂಡ್ ಗಳನ್ನು ಪ್ರದರ್ಶಿಸಲಿದ್ದಾರೆ.
ಐಶ್ವರ್ಯಾ ರೈ, ಸೋನಂ ಕಪೂರ್, ದೀಪಿಕಾ ಪಡುಕೋಣೆ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಘೋಷಿಸಲು ಸಂತಸವಾಗುತ್ತಿದೆ ಎಂದು ಲೋರಿಯಲ್ ಪ್ಯಾರಿಸ್ ನ ಜನರಲ್ ಮ್ಯಾನೇಜರ್ ರಾಗ್ಜೀತ್ ಗಾರ್ಗ್ ತಿಳಿಸಿದ್ದಾರೆ. ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್ ಮೇ 17 ರಿಂದ 28 ರ ವರೆಗೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Deepika Padukoneದೀಪಿಕಾ ಪಡುಕೋಣೆAishwarya Rai BachchanSonam Kapoorಸೋನಂ ಕಪೂರ್ಐಶ್ವರ್ಯಾ ರೈ70th Cannes Film Festivalಕ್ಯಾನೆಸ್ ಫಿಲ್ಮ್ ಫೆಸ್ಟಿವಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


