ಸಿನಿಮಾ ಸುದ್ದಿ

ತಮಿಳಿನ ಖ್ಯಾತ ಹಾಸ್ಯನಟ ಅಲ್ವ ವಾಸು ವಿಧಿವಶ

ತಮಿಳಿನಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಖ್ಯಾತ ಹಾಸ್ಯ ನಟ ಅಲ್ವ ವಾಸು ಅವರು ವಿಧಿವಶರಾಗಿದ್ದಾರೆ...

ತಮಿಳಿನ ಖ್ಯಾತ ಹಾಸ್ಯನಟ ಅಲ್ವ ವಾಸು ವಿಧಿವಶ
ಅಲ್ವ ವಾಸು
Published On :
ತಮಿಳಿನಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಖ್ಯಾತ ಹಾಸ್ಯ ನಟ ಅಲ್ವ ವಾಸು ಅವರು ವಿಧಿವಶರಾಗಿದ್ದಾರೆ. 
ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ 10.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಳೆದ ರಾತ್ರಿ ತಿಂಗಳಿನಿಂದ ಖಾಸಗಿ ಆಸ್ಪತ್ರೆಯಲ್ಲಿ ನಟ ಚಿಕಿತ್ಸೆ ಪಡೆಯುತ್ತಿದ್ದರು. 
ಹೆಚ್ಚಿನ ಚಿಕಿತ್ಸೆ ನೀಡಿದರು ಅಲ್ವ ವಾಸು ಅವರ ಆರೋಗ್ಯ ಸುಧಾರಿಸುವುದಿಲ್ಲ ಎಂದು ಆಸ್ಪತ್ರೆಯ ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡಿದ್ದರು. 
1994ರಲ್ಲಿ ಬಿಡುಗಡೆಯಾಗಿದ್ದ ಅಮೈದಿ ಪಡೈ ಚಿತ್ರದ ಮೂಲಕ ಅಲ್ವ ವಾಸು ಅವರು ಚಿರಪರಿಚಿತರಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.