ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ: ಕನ್ನಡ ಕಿರುತೆರೆ ನಟಿ ರಚನಾ ಸೇರಿ ಇಬ್ಬರ ಸಾವು
ನಿಂತಿದ್ದ ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಕಿರುತೆರೆ ನಟ ಮತ್ತು ನಟಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಸೋಲೂರು ಬಳಿ ...

Published On :
ಬೆಂಗಳೂರು: ನಿಂತಿದ್ದ ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಕಿರುತೆರೆ ನಟ ಮತ್ತು ನಟಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಸೋಲೂರು ಬಳಿ ನಡೆದಿದೆ.
ಸೋಲೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಕಿರುತೆರೆ ನಟಿ ರಚನಾ (23) ಮತ್ತು ನಟ ಜೀವನ್ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ನಟ ಕಾರ್ತಿಕ್ ಜನ್ಮ ದಿನ ನಿಮಿತ್ತ ಕುಕ್ಕೆಗೆ ಸುಬ್ರಹ್ಮಣ್ಯನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಬಿ.ಎಸ್.ರಂಜಿತ್, ಉತ್ತಮ್, ಹೊನ್ನೇಶ್, ಕಾರ್ತಿಕ್, ಎರಿಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಟಿ ರಚನಾ ಜೀಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಹಾನದಿ ಧಾರಾವಾಹಿ ಹಾಗೂ ಸ್ಟಾರ್ ಸುವರ್ಣ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ತ್ರಿವೇಣಿ ಸಂಗಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಮಾಗಡಿಯ ಕುದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


