ಜಗತ್ತಿನ ಎತ್ತರದ ಕಟ್ಟಡದಲ್ಲಿ 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಶೂಟಿಂಗ್!
ನರೇಂದ್ರ ಬಾಬು ನಿರ್ದೇಶನದ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರದ ಶೂಟಿಂಗ್ ಜಗತ್ತಿನ ಎತ್ತರದ ಕಟ್ಟಡದಲ್ಲಿ ನಡೆಯುತ್ತಿದೆ...

Published On :
ನರೇಂದ್ರ ಬಾಬು ನಿರ್ದೇಶನದ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರದ ಶೂಟಿಂಗ್ ಜಗತ್ತಿನ ಎತ್ತರದ ಕಟ್ಟಡದಲ್ಲಿ ನಡೆಯುತ್ತಿದೆ.
ದುಬೈನಲ್ಲಿರುವ ಬುರ್ಜ್ ಖಲೀಫಾ ಕಟ್ಟಡದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು ಹಿರಿಯ ನಟ ಅನಂತ್ ನಾಗ್ ಮತ್ತು ರಾಧಿಕಾ ಚೇತನ್ ಚಿತ್ತೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಜಗತ್ತಿನ ಅತೀ ಎಚ್ಚರದ ಕಟ್ಟಡ ಎಂಬ ಖ್ಯಾತಿ ಗಳಿಸಿರುವ ಬುರ್ಜ್ ಖಲೀಫಾದಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಕನ್ನಡದ ಮೊದಲ ಚಿತ್ರ ಇದಾಗಿದೆ.
ಕಳೆದ ನಾಲ್ಕು ದಿನದಿಂದ ಚಿತ್ರದ ಹಾಡೊಂದರ ಚಿತ್ರೀಕರಣ ನಡೆಯುತ್ತಿದೆ. ಚಿತ್ರಕ್ಕೆ ನರೇಂದ್ರ ಬಾಬು ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬರೆದಿದ್ದಾರೆ. ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗಷ್ಟೇ ನಡೆದಿತ್ತು.
ಚಿತ್ರಕ್ಕೆ ಹಿಂದೂಸ್ತಾನಿ ಗಾಯ ರಾಮಚಂದ್ರ ಹಡಪ ಅವರು ಸಂಗೀತ ಸಂಯೋಜಿಸುತ್ತಿದ್ದು ಪಿಕೆಎಚ್ ದಾಸ್ ರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodAnant Nagಸ್ಯಾಂಡಲ್ವುಡ್ಅನಂತ್ ನಾಗ್Narendra BabuHottegagi Genu BattegagiRadhika Chetanನರೇಂದ್ರ ಬಾಬುಹೊಟ್ಟೆಗಾಗಿ ಗೇಣು ಬಟ್ಟೆಗಾಗಿರಾಧಿಕಾ ಚೇತನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


