ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರಕ್ಕೆ ಮುಹೂರ್ತ, ನಂದ್ ಕಿಶೋರ್ ಆಕ್ಷನ್ ಕಟ್
ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಶೂಟಿಂಗ್ ಇಂದಿನಿಂದ ಪ್ರಾರಂಭವಾಗಲಿದ್ದು ನಿರ್ದೇಶಕ ನಂದ ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ...

Published On :
ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಶೂಟಿಂಗ್ ಇಂದಿನಿಂದ ಪ್ರಾರಂಭವಾಗಲಿದ್ದು ನಿರ್ದೇಶಕ ನಂದ ಕಿಶೋರ್ ಆಕ್ಷನ್ ಕಟ್ ಹೇಳಲಿದ್ದಾರೆ.
ಸರಳವಾಗಿ ಮುಹೂರ್ತ ನೆರವೇರಿಸುವ ಮೂಲಕ ಪೊಗರು ಚಿತ್ರದ ಶೂಟಿಂಗ್ ಪ್ರಾರಂಭವಾಗಲಿದೆ. ಚಿತ್ರದಲ್ಲಿ ಧ್ರುವ ಸರ್ಜಾ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು ಮೊದಲಿಗೆ 8ನೇ ತರಗತಿ ವಿದ್ಯಾರ್ಥಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಇದಕ್ಕಾಗಿ 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಚತ್ರವನ್ನು ಗಂಗಾಧರ್ ನಿರ್ಮಾಣ ಮಾಡುತ್ತಿದ್ದಾರೆ.
ಇನ್ನು ಪೊಗರು ಚಿತ್ರದೊಂದಿಗೆ ನಂದ ಕಿಶೋರ್ ಮನೋರಂಜನ್ ಅಭಿನಯದ ಬೃಹಸ್ಪತಿ ಚಿತ್ರದ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದ್ದಾರೆ. ಚಿತ್ರವನ್ನು ರಾಕಲೈನ್ ವೆಂಕಟೇಶ್ ನಿರ್ಮಿಸಿದ್ದು ಚಿತ್ರದಲ್ಲಿ ಬಾಲಿವುಡ್ ನಟಿ ಮಿಸ್ತಿ ಚಕ್ರವರ್ತಿ ಅಭಿನಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


