ಅಭಿನಯ ಚಕ್ರವರ್ತಿ ಕಿಚ್ಚನ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಭೇಟಿ
ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ (ಭಾನುವಾರ) ನಟ ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು.

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ (ಭಾನುವಾರ) ನಟ ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು. ಮನೆಗೆ ಬಂದ ಕುಮಾರಸ್ವಾಮಿ ಅವರನ್ನು ಬಹಳ ಸಂತಸದಿಂದ ಬರಮಾಡಿಕೊಂಡ ಅಭಿನಯ ಚಕ್ರವರ್ತಿ ಸುದೀಪ್ ಕುಮಾರಸ್ವಾಮಿ ಅವರಿಗೆ ತಮ್ಮ ಕೈಯಿಂದಲೇ ಅಡಿಗೆ ಮಾಡಿ ಬಡಿಸಿದರು.
ಇಬ್ಬರೂ ಸುಮಾರು 2 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶುಭ ಕೋರಿದ್ದ ಕಿಚ್ಚ ಸುದೀಪ್ ಅವರನ್ನು ಮ್ಮ ಮನೆಗೆ ಬರುವಂತೆ ಆಹ್ವಾನಿಸಿದ್ದರು. ಈ ಆಹ್ವಾನವನ್ನು ಮನ್ನಿಸಿದ ಕುಮಾರಸ್ವಾಮಿ ನಟನ ಮನೆಗೆ ಭೇಟಿ ನೀಡಿದ್ದಾರೆ.
ರಾಜಕೀಯಕ್ಕೆ ಇಲ್ಲ: ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಸುದೀಪ್ ಸುದೀಪ್ ಈ ಹಿಂದೆಯೇ ಹೇಳಿದ್ದರು. ಸುದೀಪ್ ತಂದೆ ಸಂಜೀವ್' ಚಿತ್ರರಂಗದಲ್ಲಿ ಸಾಕಷ್ಟು ಹೆಸರಿದ್ದವರು. ಎಚ್ ಡಿಕೆ ಸಹ ಚಿತ್ರರಂಗದೊಡನೆ ಒಡನಾಟ ಇರಿಸಿಕೊಂಡಿದ್ದವರು. ಇಬ್ಬರಿಗೂ ಹಳೆಯ ಸ್ನೇಹ, ಪರಿಚಯವಿತ್ತು. ಅದೇ ಕಾರಣಕ್ಕೆ ಮನೆಗೆ ತೆರಳಿ ಕುಶಲೋಪರಿ ವಿಚಾರಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSಜೆಡಿಎಸ್ಎಚ್.ಡಿ.ಕುಮಾರಸ್ವಾಮಿHD Kumaraswamyಕಿಚ್ಚ ಸುದೀಪ್Kichcha SudeepaFormer CM HDKಮಾಜಿ ಸಿಎಂ ಎಚ್ ಡಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


