ಸಹ ಸ್ಪರ್ಧಿಗೆ ಥಳಿಸಿದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಹೌಸ್ ನಿಂದ ಕಿಕ್ ಔಟ್!
ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

Published On :
ಬೆಂಗಳೂರು: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು. ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.
ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು. ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.
ಈ ಹಿಂದೆ ನಟ ಹುಚ್ಚಾ ವೆಂಕಟ್ ಕೂಡ ಸಹಸ್ಪರ್ಧಿಗೆ ಥಳಿಸುವ ಮೂಲಕ ಬಿಗ್ ಬಾಸ್ ರಿಯಾಲಿಟಿ ಶೋಯಿಂದ ಹೊರ ನಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


