ಪುನೀತ್ ಅಭಿನಯದ 'ಅಂಜನಿಪುತ್ರ' ಪ್ರದರ್ಶನಕ್ಕೆ ಕೋರ್ಟ್ ತಡೆ!
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ....

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.
ಚಿತ್ರದಲ್ಲಿ ವಕೀಲರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಬಳಕೆ ಮಾಡಲಾಗಿದ್ದು, ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಕೋರಿ ವಕೀಲ ನಾರಾಯಣಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜನವರಿ 2ರ ವರೆಗೆ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.
ಇಂದು ಸಂಜೆ 7.30ರ ನಂತರ ರಾಜ್ಯಾದ್ಯಾಂತ ಎಲ್ಲಾ ಚಿತ್ರಮಂದರಿಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ.
'ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ' ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಎ.ಹರ್ಷ ನಿರ್ದೇಶನದ ಹಾಗೂ ಎಮ್ ಎನ್.ಕುಮಾರ್ ನಿರ್ಮಾಣದ ಅಂಜನಿಪುತ್ರ ಕಳೆದ ಗುರುವಾರ ತೆರೆ ಕಂಡಿದ್ದು, ಪವರ್ ಸ್ಟಾರ್ ಪುನೀತ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


